Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:26 - ಪರಿಶುದ್ದ ಬೈಬಲ್‌

26 ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಜುದೇಯದ ನಗರಗಳು, ಜೆರುಸಲೇಮಿನ ಸುತ್ತಮುತ್ತಲಿನ ಪ್ರದೇಶಗಳು, ಬೆನ್ಯಾಮಿನ್ ಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣ ಪ್ರಾಂತ್ಯ, ಈ ಎಲ್ಲ ಸ್ಥಳಗಳಿಂದ ಸರ್ವಾಂಗಹೋಮಪಶು, ಯಜ್ಞಪಶು, ಧಾನ್ಯನೈವೇದ್ಯ, ಧೂಪ ಮತ್ತು ಕೃತಜ್ಞತಾರ್ಪಣೆ ಇವುಗಳನ್ನು ಜನರು ನನ್ನ ಆಲಯಕ್ಕೆ ತೆಗೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಯೆಹೂದದ ಪಟ್ಟಣಗಳು, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ, ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬೀ ಕೃತಜ್ಞತಾರ್ಪಣಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:26
17 ತಿಳಿವುಗಳ ಹೋಲಿಕೆ  

ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”


ಕುರಿಗಳು ತಮ್ಮ ಮುಂದೆ ನಡೆದುಕೊಂಡು ಹೋಗುವಾಗ ಕುರುಬರು ಅವುಗಳನ್ನು ಎಣಿಸುವರು. ಇಡೀ ದೇಶದಲ್ಲೆಲ್ಲ ಅಂದರೆ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶಗಳಲ್ಲಿಯೂ ನೆಗೆವ್ ಪ್ರದೇಶದಲ್ಲಿಯೂ ಯೆಹೂದದ ಎಲ್ಲಾ ಊರುಗಳಲ್ಲಿಯೂ ತಮ್ಮ ಕುರಿಗಳನ್ನು ಎಣಿಸುತ್ತಿರುವರು.”


ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.


ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.


ಆದ್ದರಿಂದ ನಾನು ನಿನ್ನ ಆಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು