ಯೆರೆಮೀಯ 17:3 - ಪರಿಶುದ್ದ ಬೈಬಲ್3 ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬೈಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತಗಳಲ್ಲಿ ನೀವು ಮಾಡಿದ ಪಾಪದ ನಿವಿುತ್ತ ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನೂ ಪೂಜಾಸ್ಥಳಗಳನ್ನೂ ಸೂರೆಗೆ ಈಡುಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು. ಅಧ್ಯಾಯವನ್ನು ನೋಡಿ |
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’