ಯೆರೆಮೀಯ 17:5 - ಪರಿಶುದ್ದ ಬೈಬಲ್5 ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು. ಅಧ್ಯಾಯವನ್ನು ನೋಡಿ |
ಆಗ ಉಳಿದವರು ಸೆರೆಹಿಡಿಯಲ್ಪಡುವರು. ಅವರು ಪರದೇಶಕ್ಕೆ ಒಯ್ಯಲ್ಪಟ್ಟು ಅಲ್ಲಿ ವಾಸಿಸುವರು. ಅಲ್ಲಿ ಅಳಿದುಳಿದ ಜನರು ನನ್ನನ್ನು ಜ್ಞಾಪಿಸಿಕೊಳ್ಳುವರು ಮತ್ತು ಅವರ ಅಪನಂಬಿಗಸ್ತಿಕೆಯ ಹೃದಯವನ್ನು ನಾನು ಜಜ್ಜಿದೆನು. ತಾವು ಮಾಡಿದ ಕೆಟ್ಟ ಕೆಲಸಗಳಿಗಾಗಿ ತಮ್ಮನ್ನು ತಾವೇ ದ್ವೇಷಿಸುವರು. ಹಿಂದಿನ ಕಾಲದಲ್ಲಿ ಅವರು ನನ್ನಿಂದ ದೂರವಾಗಿ ನನ್ನನ್ನು ತ್ಯಜಿಸಿದರು. ತಮ್ಮ ಹೊಲಸು ವಿಗ್ರಹಗಳ ಹಿಂದೆ ಹೋದರು. ಗಂಡನನ್ನು ಬಿಟ್ಟು ಬೇರೆ ಪುರುಷನ ಸಂಗಡ ಓಡುವ ಸ್ತ್ರೀಯಂತೆ ಅವರಿದ್ದರು. ಅವರು ಇನ್ನೂ ಅನೇಕ ಅಸಹ್ಯಕರವಾದ ಕಾರ್ಯಗಳನ್ನು ಮಾಡಿದರು.