ಯೆರೆಮೀಯ 17:7 - ಪರಿಶುದ್ದ ಬೈಬಲ್7 ಆದರೆ ಯೆಹೋವನಲ್ಲಿ ನಂಬಿಕೆಯುಳ್ಳ ಮನುಷ್ಯನು ದೇವರ ಕೃಪೆಗೆ ಪಾತ್ರನಾಗುವನು. ಏಕೆಂದರೆ ತಾನು ನಂಬಿಕೆಯುಳ್ಳವನೆಂದು ಅವನು ಯೆಹೋವನಿಗೆ ತೋರಿಸಿಕೊಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾವನು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾನೋ ಯಾವನಿಗೆ ಯೆಹೋವನು ಭರವಸವಾಗಿದ್ದಾನೋ ಅವನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು. ಅಧ್ಯಾಯವನ್ನು ನೋಡಿ |
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.