Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:13 - ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವದನ್ನು ಆಲಿಸಿರಿ: “ಬೇರೆ ಜನಾಂಗದ ಜನರಿಗೆ ಈ ಪ್ರಶ್ನೆಯನ್ನು ಕೇಳಿರಿ, ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಇಂತೆಂದರು : “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಯೆಹೋವನು ಹೀಗನ್ನುತ್ತಾನೆ - ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯ ಕಾರ್ಯವನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:13
14 ತಿಳಿವುಗಳ ಹೋಲಿಕೆ  

ಯೆಹೋವನು, “ಯೆಹೂದ ಪ್ರದೇಶದಲ್ಲಿ ಭಯಂಕರವಾದ ಮತ್ತು ಅಸಹ್ಯವಾದ ಸಂಗತಿಗಳು ನಡೆದಿವೆ.


ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.


ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.”


ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.


“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.


ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.


ಫಿಲಿಷ್ಟಿಯರು ಭಯಗೊಂಡು, “ದೇವರುಗಳೇ ಅವರ ಪಾಳೆಯಕ್ಕೆ ಬಂದಿದ್ದಾರೆ! ನಾವು ತೊಂದರೆಯಲ್ಲಿದ್ದೇವೆ. ಹಿಂದೆಂದೂ ಈ ರೀತಿ ಆಗಿರಲಿಲ್ಲ!


ಲೆಬನೋನಿನ ಪರ್ವತಗಳ ಮೇಲಿನ ಹಿಮವು ಇಳಿಜಾರಿನ ಬಂಡೆಯಿಂದ ಎಂದಾದರೂ ಕರಗುವುದೇ? ಬಹುದೂರದಲ್ಲಿ ಹುಟ್ಟಿ ಹರಿದುಬರುವ ತೊರೆಗಳು ಎಂದಾದರೂ ಹರಿಯದೆ ನಿಂತುಹೋಗುವುದೇ?


ಇಸ್ರೇಲಿನ ಜನರೇ, ಈ ಹಾಡನ್ನು ಕೇಳಿರಿ. ಇದು ನಿಮ್ಮ ಮರಣದ ಗೀತೆ.


ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು