ಯೆರೆಮೀಯ 18:18 - ಪರಿಶುದ್ದ ಬೈಬಲ್18 ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.