Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:21 - ಪರಿಶುದ್ದ ಬೈಬಲ್‌

21 ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:21
27 ತಿಳಿವುಗಳ ಹೋಲಿಕೆ  

“ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.


ನಾವು ಅನಾಥರಾಗಿದ್ದೇವೆ. ನಮಗೆ ತಂದೆಯೇ ಇಲ್ಲ. ನಮ್ಮ ತಾಯಂದಿರು ವಿಧವೆಗಳಂತಾಗಿದ್ದಾರೆ.


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


ಮೃತ್ಯುವು ಬಂದು ನಮ್ಮ ಕಿಟಕಿಗಳಿಂದ ಇಳಿದಿದೆ. ಮೃತ್ಯುವು ನಮ್ಮ ಅರಮನೆಗಳಲ್ಲಿ ಪ್ರವೇಶ ಮಾಡಿದೆ. ಬೀದಿಯಲ್ಲಿ ಆಡುವ ನಮ್ಮ ಮಕ್ಕಳಿಗೆ ಮೃತ್ಯುವು ಹಿಡಿದುಕೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸೇರುವ ನಮ್ಮ ಯುವಕರಿಗೆ ಮೃತ್ಯುವು ಹಿಡಿದುಕೊಂಡಿದೆ.”


ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.


ನಿಮ್ಮ ಮೇಲೆ ಕೋಪಗೊಳ್ಳುವೆನು; ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ಆಗ ನಿಮ್ಮ ಹೆಂಡತಿಯರು ವಿಧವೆಯರಾಗುವರು; ನಿಮ್ಮ ಮಕ್ಕಳು ಅನಾಥರಾಗುವರು.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.


ಆದರೆ ಯೆಹೋವನೇ, ನಿನಗೆ ನನ್ನ ಹೃದಯದ ಬಗ್ಗೆ ತಿಳಿದಿದೆ, ನೀನು ನನ್ನನ್ನು ನೋಡಿ ನನ್ನ ಮನಸ್ಸನ್ನು ಪರೀಕ್ಷಿಸುವೆ. ವಧೆಗೆ ಎಳೆದುಕೊಂಡು ಹೋಗುವ ಕುರಿಗಳಂತೆ ಆ ಕೆಡುಕರನ್ನು ಎಳೆದುಹಾಕು. ಅವರನ್ನು ವಧೆಯ ದಿನಕ್ಕೆಂದು ಆರಿಸು.


ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.


ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ಸೈನಿಕರು ಬಾಬಿಲೋನಿನ ಯುವಕರನ್ನು ಹಿಡಿದು ಕೊಲ್ಲುವರು. ಶಿಶುಗಳಿಗೂ ದಯೆತೋರುವುದಿಲ್ಲ; ಮಕ್ಕಳಿಗೆ ಕರುಣೆತೋರುವುದಿಲ್ಲ.


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಬದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.


ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಹೀಗೆನ್ನುತ್ತಾನೆ:


ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.


ಬಳಿಕ, ಕೊಲೆಗಾರ್ತಿಯರೂ ವ್ಯಭಿಚಾರಿಣಿಯರೂ ಶಿಕ್ಷಿಸಲ್ಪಡುವಂತೆ ನಾನು ನಿನ್ನನ್ನು ದಂಡಿಸುವೆನು. ನನ್ನ ಭಯಂಕರವಾದ ಕೋಪದಿಂದ ನಿನಗೆ ಮರಣದಂಡನೆಯನ್ನು ವಿಧಿಸುವೆನು.


ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.


ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು