Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:22 - ಪರಿಶುದ್ದ ಬೈಬಲ್‌

22 ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಬಲೆಯಲ್ಲಿ ಸಿಕ್ಕಿಸಬೇಕೆಂದು ಪ್ರಯತ್ನ ಮಾಡಿದ್ದಾರೆ. ನಾನು ಸಿಕ್ಕಿಹಾಕಿಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಬಲೆಗಳನ್ನು ಅವರು ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ; ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:22
23 ತಿಳಿವುಗಳ ಹೋಲಿಕೆ  

ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.


ಅದು ಒಂದು ಯುದ್ಧದ ದಿವಸದಂತಿರುವುದು; ಎಲ್ಲೆಲ್ಲೂ ಕೊಂಬು, ತುತ್ತೂರಿಗಳ ಧ್ವನಿಗಳನ್ನು ಜನರು ಬುರುಜು, ಕೊತ್ತಲಗಳಿಂದ ಕೇಳಿಸಿಕೊಳ್ಳುವರು.


ಆಗ ಫರಿಸಾಯರು, ಅಲ್ಲಿಂದ ಹೊರಟುಹೋಗಿ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಉಪಾಯಗಳನ್ನು ಮಾಡಿಕೊಂಡರು.


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.


ಮೊದಲನೆ ಹೆರಿಗೆಯ ಸಮಯದಲ್ಲಿ ವೇದನೆಪಡುವ ಹೆಂಗಸಿನ ಸ್ವರದಂತಿರುವ ಒಂದು ಧ್ವನಿಯನ್ನು ನಾನು ಕೇಳಿದೆ, ಇದು ಚೀಯೋನ್ ನಗರಿಯ ಮಗಳ ಕೂಗಾಟ. ಅವಳು ತನ್ನ ಎರಡೂ ಕೈಗಳನ್ನು ಮೇಲಕ್ಕೆ ಎತ್ತಿ ಪ್ರಾರ್ಥಿಸುತ್ತಾ, “ಅಯ್ಯೋ, ನಾನು ಮೂರ್ಛೆ, ಹೋಗುವುದರಲ್ಲಿದ್ದೇನೆ, ನನ್ನ ಸುತ್ತಲೆಲ್ಲ ಕೊಲೆಗಡುಕರಿದ್ದಾರೆ” ಎಂದು ಹೇಳುತ್ತಿದ್ದಾಳೆ.


ಬಾತ್‌ಗಲ್ಲೀಮ್‌ನವರೇ, ಚೀರಾಡಿರಿ! ಲಯೆಷವೇ, ಕಿವಿಗೊಡು. ಅನಾತೋತೇ, ನನಗೆ ಉತ್ತರಕೊಡು!


ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.


ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ.


ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.


ಯೆಹೋವನೇ, ನನ್ನ ದೇವರು ನೀನೇ. ನನ್ನ ಪ್ರಾರ್ಥನೆಗೆ ಕಿವಿಗೊಡು.


ನಾನು ಸುತ್ತಮುತ್ತ ನೋಡಿದರೂ ನನ್ನ ಸ್ನೇಹಿತರಲ್ಲಿ ಯಾರೂ ಕಾಣುತ್ತಿಲ್ಲ. ಓಡಿಹೋಗಲು ನನಗೆ ಯಾವ ಸ್ಥಳವೂ ಇಲ್ಲ. ನನ್ನನ್ನು ರಕ್ಷಿಸಲು ಯಾರೂ ಪ್ರಯತ್ನಿಸುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು