ಯೆರೆಮೀಯ 18:6 - ಪರಿಶುದ್ದ ಬೈಬಲ್6 “ಇಸ್ರೇಲ್ ಮನೆತನದವರೇ, ನಾನು ನಿಮಗೆ ಹೀಗೆಯೇ ಮಾಡಲು ಸಾಧ್ಯವೆಂಬುದನ್ನು ನೀವು ಬಲ್ಲಿರಿ. ನೀವು ಕುಂಬಾರನ ಕೈಯಲ್ಲಿದ್ದ ಜೇಡಿಮಣ್ಣಿನಂತಿದ್ದೀರಿ. ನಾನು ಆ ಕುಂಬಾರನಂತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ ನೀವು ನನ್ನ ಕೈಯಲ್ಲಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ. ಅಧ್ಯಾಯವನ್ನು ನೋಡಿ |
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.
“ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.