ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”
ಅವರು ನನ್ನನ್ನು ಸಂತೋಷಪಡಿಸುವರು. ಅವರಿಗೆ ಒಳ್ಳೆಯದನ್ನು ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನ್ನು ಈ ದೇಶದಲ್ಲಿ ನೆಟ್ಟು ಬೆಳೆಯುವಂತೆ ಮಾಡುತ್ತೇನೆ. ಇದನ್ನು ನಾನು ಮನಃಪೂರ್ವಕವಾಗಿ ಮಾಡುತ್ತೇನೆ.’”
ಇದು ಯೆಹೋವನ ನುಡಿ: “ಯೆಹೋವನಿಗಾಗಿ ಜೆರುಸಲೇಮ್ ನಗರವನ್ನು ಮತ್ತೆ ಕಟ್ಟುವ ಕಾಲ ಬರುತ್ತಿದೆ. ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಇಡೀ ಪಟ್ಟಣವನ್ನು ಮತ್ತೊಮ್ಮೆ ಕಟ್ಟಲಾಗುವುದು.
ನನ್ನ ವಧುವಾದ ಇಸ್ರೇಲೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು, ಆಗ ನೀನು ಮತ್ತೆ ಒಂದು ಜನಾಂಗವಾಗುವೆ. ನೀನು ಮೊದಲಿನಂತೆ ನಿನ್ನ ದಮ್ಮಡಿಯನ್ನು ತೆಗೆದುಕೊಂಡು ಸಂತೋಷದಿಂದ ನೃತ್ಯ ಮಾಡುವವರೊಡನೆ ನೃತ್ಯ ಮಾಡುವೆ.
ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.