Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:1 - ಪರಿಶುದ್ದ ಬೈಬಲ್‌

1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಒಬ್ಬ ಕುಂಬಾರನ ಹತ್ತಿರ ಹೋಗಿ ಅವನಿಂದ ಒಂದು ಮಣ್ಣಿನ ಕೊಡವನ್ನು ಕೊಂಡುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:1
20 ತಿಳಿವುಗಳ ಹೋಲಿಕೆ  

ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೋ ಎಂಬಂತೆ ಪರಿಗಣಿಸಿದ್ದಾರೆ.


ಒಂದು ದೊಡ್ಡ ಆವೆಮಣ್ಣಿನ ಭರಣಿ ನಚ್ಚುನೂರಾಗಿ ಹೋಗುವಂತೆ ನೀವಿದ್ದೀರಿ. ಅದರ ತುಂಡುಗಳಿಂದ ಏನೂ ಪ್ರಯೋಜನವಿಲ್ಲ. ಆ ಭರಣಿಯ ಚೂರಿನಿಂದ ಸುಡುವ ಕಲ್ಲಿದ್ದಲನ್ನು ಹೊರತೆಗೆಯಲು ಅಥವಾ ಅದರಿಂದ ನೀರು ಸೇದಲು ಆಗುವದಿಲ್ಲ.”


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


ಇತ್ತ ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯ ನಾಯಕರು, ಪ್ರಧಾನಯಾಜಕನ ಭವನದಲ್ಲಿ ಸಭೆ ಸೇರಿದರು. ಪ್ರಧಾನಯಾಜಕನ ಹೆಸರು ಕಾಯಫ.


“ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ: ‘ಕ್ರಯಪತ್ರದ ಎರಡೂ ಪ್ರತಿಗಳನ್ನು ಅಂದರೆ ರುಜುಮಾಡಿದ ಮತ್ತು ರುಜುಮಾಡದ ಪ್ರತಿಗಳನ್ನು ತೆಗೆದುಕೊಂಡು ಅವುಗಳು ಬಹುಕಾಲ ಉಳಿಯುವಂತೆ ಒಂದು ಮಣ್ಣಿನ ಪಾತ್ರೆಯಲ್ಲಿ ಹಾಕಿ ಮುಚ್ಚಿಡು.’


ಆಗ ಹಿರಿಯ ನಾಯಕರಲ್ಲಿ ಕೆಲವರು ಎದ್ದುನಿಂತು ಎಲ್ಲಾ ಜನರನ್ನುದ್ದೇಶಿಸಿ


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.


“ನರಪುತ್ರನೇ, ಒಂದು ಇಟ್ಟಿಗೆಯನ್ನು ತೆಗೆದುಕೊ, ಅದನ್ನು ನಿನ್ನ ಮುಂದೆ ಇಟ್ಟು ಅದರ ಮೇಲೆ ಒಂದು ಚಿತ್ರವನ್ನು ಅಂದರೆ ಜೆರುಸಲೇಮ್ ನಗರದ ಚಿತ್ರವನ್ನು ಕೊರೆ.


ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೊ.”


“ನರಪುತ್ರನೇ, ಈ ಕಾರ್ಯಗಳನ್ನು ಮುತ್ತಿಗೆಯ ಕಾಲ ಮುಗಿಯಿತೆಂದು ಸೂಚಿಸುವ ಅವಧಿಯ ನಂತರ ಮಾಡಬೇಕು. ನೀನು ಕ್ಷೌರಕನ ಹರಿತವಾದ ಕ್ಷೌರಕತ್ತಿಯನ್ನು ತೆಗೆದುಕೊಳ್ಳಬೇಕು. ನಿನ್ನ ತಲೆಯ ಕೂದಲನ್ನೂ ಗಡ್ಡವನ್ನೂ ಬೋಳಿಸು. ಕೂದಲನ್ನು ತ್ರಾಸಿನಲ್ಲಿ ಹಾಕಿ ಅದನ್ನು ತೂಕ ಮಾಡು. ಆ ಕೂದಲುಗಳನ್ನು ಮೂರು ಪಾಲಾಗಿ ಮಾಡು. ಅದರ ಒಂದು ಪಾಲನ್ನು ನೀನು ಚಿತ್ರಿಸಿದ್ದ ಇಟ್ಟಿಗೆಯ ಮೇಲೆ ಹಾಕು. ಆ ನಗರದ ಮೇಲೆ ಕೂದಲನ್ನು ಸುಟ್ಟುಬಿಡು. ಇದು, ಜನರಲ್ಲಿ ಕೆಲವು ಮಂದಿ ನಗರದಲ್ಲಿ ಸಾಯುವರು ಎಂಬುದಕ್ಕೆ ಗುರುತಾಗಿದೆ. ನೀನು ಕೂದಲಲ್ಲಿ ಮೂರನೆ ಒಂದು ಭಾಗವನ್ನು ತೆಗೆದುಕೊಂಡು ಅದನ್ನು ಪಟ್ಟಣದ ಹೊರಗೆ ಸುತ್ತಲೆಲ್ಲಾ ನಿನ್ನ ಕ್ಷೌರಕತ್ತಿಯಿಂದ ಕತ್ತರಿಸು. ಕೆಲವು ಜನರು ಪಟ್ಟಣದ ಹೊರಗೆ ಸಾಯುತ್ತಾರೆ ಎಂಬುದನ್ನು ಇದು ಸೂಚಿಸುತ್ತದೆ. ಬಳಿಕ ನಿನ್ನ ಕೂದಲಿನ ಉಳಿದ ಮೂರನೆಯ ಒಂದು ಭಾಗವನ್ನು ಗಾಳಿಯಲ್ಲಿ ತೂರಿಬಿಡು. ಗಾಳಿಯು ಅದನ್ನು ಬಹುದೂರದವರೆಗೆ ಬಡಿದುಕೊಂಡು ಹೋಗಲಿ. ಇದೇ ರೀತಿಯಲ್ಲಿ ನಾನು ಖಡ್ಗವನ್ನು ಇರಿದು ಅವರನ್ನು ಬಹುದೂರದ ದೇಶಗಳಿಗೆ ಅಟ್ಟಿಸಿ ಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು