ಯೆರೆಮೀಯ 19:3 - ಪರಿಶುದ್ದ ಬೈಬಲ್3 ನಿನ್ನ ಜೊತೆಯಲ್ಲಿದ್ದ ಜನರಿಗೆ ಹೇಳು, ‘ಯೆಹೂದದ ರಾಜನೇ, ಜೆರುಸಲೇಮಿನ ಜನರೇ, ಯೆಹೋವನ ಈ ಸಂದೇಶವನ್ನು ಕೇಳಿರಿ. ಇಸ್ರೇಲರ ದೇವರೂ ಸರ್ವಶಕ್ತನಾದ ಯೆಹೋವನೂ ಹೀಗೆ ಹೇಳುತ್ತಾನೆ: ನಾನು ಈ ಸ್ಥಳಕ್ಕೆ ಒಂದು ಭಯಂಕರವಾದ ಕೇಡನ್ನು ಉಂಟುಮಾಡುವೆನು. ಅದರ ಬಗ್ಗೆ ಕೇಳಿದ ಪ್ರತಿಯೊಬ್ಬ ವ್ಯಕ್ತಿಯು ವಿಸ್ಮಯಪಡುವನು ಮತ್ತು ಭಯಪಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು. ಅಧ್ಯಾಯವನ್ನು ನೋಡಿ |
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.