ಯೆರೆಮೀಯ 19:7 - ಪರಿಶುದ್ದ ಬೈಬಲ್7 ಈ ಸ್ಥಳದಲ್ಲಿ ನಾನು ಯೆಹೂದದ ಮತ್ತು ಜೆರುಸಲೇಮಿನ ಜನರ ಯೋಜನೆಗಳನ್ನು ಹಾಳು ಮಾಡುತ್ತೇನೆ. ಶತ್ರುವು ಈ ಜನರನ್ನು ಬೆನ್ನಟ್ಟಿ ಬರುವನು. ನಾನು ಈ ಸ್ಥಳದಲ್ಲಿ ಖಡ್ಗದಿಂದ ಯೆಹೂದದ ಜನರ ಕೊಲೆಯಾಗುವಂತೆ ಮಾಡುವೆನು. ಅವರ ಹೆಣಗಳು ಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ಆಹಾರವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಅಧ್ಯಾಯವನ್ನು ನೋಡಿ |
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’