ಯೆರೆಮೀಯ 19:8 - ಪರಿಶುದ್ದ ಬೈಬಲ್8 ನಾನು ಈ ನಗರವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಜೆರುಸಲೇಮಿನಿಂದ ಹಾದುಹೋಗುವಾಗ ಜನರು ಸಿಳ್ಳುಹಾಕಿ ತಲೆಯಾಡಿಸಿ ಹೋಗುವರು. ನಗರವು ಹಾಳಾಗಿರುವುದನ್ನು ಕಂಡು ಅವರು ಬೆರಗಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ, “ನನ್ನ ಸ್ವಸಾಮರ್ಥ್ಯದಿಂದ ನಾನು ಈ ಪ್ರಮಾಣ ಮಾಡುವೆನು. ನಾನು ಆಣೆಯಿಟ್ಟು ಹೇಳುವೆನು. ಬೊಚ್ರ ನಗರವನ್ನು ನಾಶಮಾಡಲಾಗುವುದು. ಆ ನಗರ ಒಂದು ಹಾಳು ದಿಬ್ಬವಾಗುವುದು. ಬೇರೆ ನಗರಗಳಿಗೆ ದುರ್ಗತಿ ಬರಲಿ ಎಂದು ಶಪಿಸುವಾಗ ಜನರು ‘ಬೊಚ್ರದಂತೆ ಹಾಳಾಗಲಿ’ ಎಂದು ಈ ನಗರದ ಉದಾಹರಣೆಯನ್ನು ಕೊಡುವರು. ಜನರು ಈ ನಗರವನ್ನು ಅವಮಾನ ಮಾಡುವರು. ಬೊಚ್ರ ನಗರದ ಸುತ್ತಮುತ್ತಲಿನ ಪಟ್ಟಣಗಳು ಶಾಶ್ವತವಾಗಿ ಹಾಳುಬೀಳುವವು.”
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”