ಯೆರೆಮೀಯ 2:14 - ಪರಿಶುದ್ದ ಬೈಬಲ್14 “ಇಸ್ರೇಲಿನ ಜನರು ಗುಲಾಮರಾಗಿರುವರೇ? ಅವರು ಗುಲಾಮರಾಗಿ ಹುಟ್ಟಿದ ಮನುಷ್ಯನಂತಿರುವರೇ? ಬೇರೆಯವರು ಇಸ್ರೇಲರ ಸಂಪತ್ತನ್ನು ಏಕೆ ತೆಗೆದುಕೊಂಡರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ರಾಯೇಲ್ ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಇಸ್ರಯೇಲ್ ಒಬ್ಬ ಮನೆ ಆಳೊ? ಮನೆಯಲ್ಲೆ ಗುಲಾಮನಾಗಿ ಹುಟ್ಟಿದವನೋ? ಇಲ್ಲವಾದರೆ ಬೇರೆಯವರಿಂದ ಏಕೆ ಸೂರೆಯಾದ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲು ಒಬ್ಬ ದಾಸನೋ? ಮನೆಯ ಗುಲಾಮನಾಗಿ ಹುಟ್ಟಿದವನೋ? ಏಕೆ ಸೂರೆಯಾದನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು? ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.