ಯೆರೆಮೀಯ 2:17 - ಪರಿಶುದ್ದ ಬೈಬಲ್17 ತೊಂದರೆಯು ನಿನ್ನ ತಪ್ಪಿನ ಫಲ. ನಿನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನಿಗೆ ನೀನು ವಿಮುಖನಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನನ್ನು ದಾರಿಯಲ್ಲಿ ನಡಿಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ? ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.