ಯೆರೆಮೀಯ 2:19 - ಪರಿಶುದ್ದ ಬೈಬಲ್19 ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.