ಯೆರೆಮೀಯ 2:2 - ಪರಿಶುದ್ದ ಬೈಬಲ್2 “ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ. ಅಧ್ಯಾಯವನ್ನು ನೋಡಿ |
‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.