ಯೆರೆಮೀಯ 2:20 - ಪರಿಶುದ್ದ ಬೈಬಲ್20 “ಯೆಹೂದವೇ, ಬಹಳ ದಿನಗಳ ಹಿಂದೆಯೇ ನೀನು ನಿನ್ನ ನೊಗವನ್ನು ಕಳಚಿ ಎಸೆದುಬಿಟ್ಟೆ. ನನ್ನೊಂದಿಗೆ ಬಂಧಿಸಿದ ಕಣ್ಣಿಗಳನ್ನು ಹರಿದುಬಿಟ್ಟೆ. ‘ನಾನು ನಿನ್ನನ್ನು ಸೇವಿಸುವದಿಲ್ಲ’ ವೆಂದು ನನಗೆ ಹೇಳಿಬಿಟ್ಟೆ. ನಿಜವಾಗಿ ನೋಡಿದರೆ ಎತ್ತರವಾದ ಎಲ್ಲಾ ಪರ್ವತಗಳ ಮೇಲೂ ಮತ್ತು ಸೊಂಪಾಗಿ ಬೆಳೆದ ಎಲ್ಲಾ ಮರಗಳ ಕೆಳಗೂ ನೀನು ಮಲಗಿಕೊಂಡು ವೇಶ್ಯೆಯರಂತೆ ವರ್ತಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ. ಅಧ್ಯಾಯವನ್ನು ನೋಡಿ |
ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”