Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:21 - ಪರಿಶುದ್ದ ಬೈಬಲ್‌

21 ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:21
27 ತಿಳಿವುಗಳ ಹೋಲಿಕೆ  

ನನ್ನ ದ್ರಾಕ್ಷಿತೋಟಕ್ಕೆ ನಾನು ಇನ್ನೇನು ಮಾಡಬೇಕಿತ್ತು. ನಾನು ಮಾಡಬೇಕಿದ್ದನ್ನೆಲ್ಲಾ ಮಾಡಿದೆನು. ಒಳ್ಳೆಯ ದ್ರಾಕ್ಷಿಹಣ್ಣು ಬಿಡುವುದೆಂದು ಆಶಿಸಿದ್ದೆನು. ಆದರೆ ಅದು ಹೊಲಸು ದ್ರಾಕ್ಷಿಗಳನ್ನೇ ಬಿಟ್ಟಿತು. ಹೀಗೆ ಆದದ್ದೇಕೆ?


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


“ನಾನು ನಿಜವಾದ ದ್ರಾಕ್ಷಿಬಳ್ಳಿ. ನನ್ನ ತಂದೆ ತೋಟಗಾರನು.


ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.


ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.


“ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.


ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ಯೇಸು ಜನರಿಗೆ ಸಾಮ್ಯಗಳ ಮೂಲಕ ಉಪದೇಶಿಸುತ್ತಾ ಅವರಿಗೆ ಹೇಳಿದ್ದೇನೆಂದರೆ: “ಒಬ್ಬನು ದ್ರಾಕ್ಷಿಯ ತೋಟವನ್ನು ಮಾಡಿ, ಸುತ್ತಲೂ ಗೋಡೆ ಹಾಕಿಸಿ, ದ್ರಾಕ್ಷಾರಸವನ್ನು ತೆಗೆಯಲು ಅಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದನು. ಅವನು ಕೆಲವು ರೈತರಿಗೆ ತೋಟವನ್ನು ಗುತ್ತಿಗೆಗೆ ಕೊಟ್ಟು ಪ್ರವಾಸಕ್ಕೆ ಹೊರಟನು.


ಅವರ ಹೊಲಗಳೂ ದ್ರಾಕ್ಷಾಲತೆಗಳೂ ಸೊದೋಮ್ ಗೊಮೋರಗಳಂತೆ ನಾಶ ಮಾಡಲ್ಪಡುವವು.


“ಈ ಸಾಮ್ಯವನ್ನು ಕೇಳಿರಿ: ಒಬ್ಬ ಮನುಷ್ಯನಿಗೆ ಒಂದು ಸ್ವಂತ ತೋಟವಿತ್ತು. ಅವನು ತೋಟದಲ್ಲಿ ದ್ರಾಕ್ಷಿಯನ್ನು ಬೆಳೆಸಿದನು; ತೋಟದ ಸುತ್ತಲೂ ಗೋಡೆ ಕಟ್ಟಿ ದ್ರಾಕ್ಷಾರಸ ತಯಾರಿಸಲು ಆಲೆಯನ್ನು ಹೂಡಿಸಿದನು. ಕಾವಲಿಗಾಗಿ ಅಟ್ಟಣೆಯನ್ನೂ ಕಟ್ಟಿಸಿದನು. ಅವನು ಆ ತೋಟವನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟು ವಿದೇಶಕ್ಕೆ ಹೊರಟುಹೋದನು.


ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಯೆಹೋವನು ಹೀಗೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ.


ದೇವರು ಹೇಳುವುದೇನೆಂದರೆ: “ಜೆರುಸಲೇಮಿನ ಕಡೆಗೆ ನೋಡಿರಿ. ಆಕೆ ನನ್ನ ಮೇಲೆ ನಂಬಿಕೆ ಇಟ್ಟು ಹಿಂಬಾಲಿಸಿದಂಥ ನಗರಿಯಾಗಿದ್ದಳು. ಆದರೆ ಈಗ ಆಕೆ ಸೂಳೆಯಾಗಲು ಕಾರಣವೇನು? ಈಗ ಆಕೆ ನನ್ನನ್ನು ಹಿಂಬಾಲಿಸುತ್ತಿಲ್ಲ. ಜೆರುಸಲೇಮು ನ್ಯಾಯನೀತಿಗಳಿಂದ ತುಂಬಿರಬೇಕಿತ್ತು. ಅಲ್ಲಿ ವಾಸಿಸುವ ಜನರು ದೇವರ ಇಚ್ಛೆಯಂತೆ ನಡೆಯಬೇಕಿತ್ತು. ಆದರೆ ಈಗ ಕೊಲೆಗಡುಕರು ಅಲ್ಲಿ ವಾಸಿಸುತ್ತಿದ್ದಾರೆ.


ನೀವು ಆತನ ಸೇವಕನಾದ ಅಬ್ರಹಾಮನ ಸಂತತಿಯವರಾಗಿದ್ದೀರಿ; ಆತನು ಆರಿಸಿಕೊಂಡ ಯಾಕೋಬನ ಸಂತತಿಯವರಾಗಿದ್ದೀರಿ.


ಯೆಹೋಶುವನು ಜೀವಿಸಿದಾಗ ಇಸ್ರೇಲರು ಯೆಹೋವನ ಸೇವೆಮಾಡಿದರು; ಯೆಹೋಶುವನ ಮರಣಾನಂತರವೂ ಅವರು ಯೆಹೋವನ ಸೇವೆಯನ್ನು ಮುಂದುವರೆಸಿದರು. ಯೆಹೋವನು ಇಸ್ರೇಲರಿಗಾಗಿ ಮಾಡಿದ ಮಹತ್ಕಾರ್ಯಗಳನ್ನು ನೋಡಿದ್ದ ಅವರ ನಾಯಕರು ಜೀವಿಸಿದ್ದಾಗಲೂ ಇಸ್ರೇಲರು ಯೆಹೋವನ ಸೇವೆಮಾಡಿದರು.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.


ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”


ಆ ಸಮಯದಲ್ಲಿ ಜನರು ಮನೋಹರವಾದ ದ್ರಾಕ್ಷಿತೋಟದ ವಿಷಯವಾಗಿ ಹಾಡುವರು.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”


“ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


“ಯೆಹೂದದ ದ್ರಾಕ್ಷಿಯ ಸಾಲುಬಳ್ಳಿಗಳ ಬಳಿಗೆ ಹೋಗಿರಿ, ಆ ಬಳ್ಳಿಗಳನ್ನು ಕತ್ತರಿಸಿರಿ. ಆದರೆ ಅವುಗಳನ್ನು ಸಂಪೂರ್ಣವಾಗಿ ನಾಶಮಾಡಬೇಡಿರಿ. ಅವುಗಳ ಎಲ್ಲಾ ಕೊಂಬೆಗಳನ್ನು ಕತ್ತರಿಸಿಬಿಡಿ. ಏಕೆಂದರೆ, ಈ ಕೊಂಬೆಗಳು ಯೆಹೋವನಿಗೆ ಸಂಬಂಧಿಸಿಲ್ಲ.


“ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.


“ನರಪುತ್ರನೇ, ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು