Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:24 - ಪರಿಶುದ್ದ ಬೈಬಲ್‌

24 ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆಯಂತೆ ಇರುವೆ. ಅದು ಬೆದೆಯ ಕಾಲದಲ್ಲಿ ಗಾಳಿಯನ್ನು ಮೂಸಿ ನೋಡುತ್ತದೆ. ಅದಕ್ಕೆ ಬೆದೆ ಏರಿದಾಗ ಯಾರೂ ಅದನ್ನು ಹಿಡಿಯಲು ಸಾಧ್ಯವಿಲ್ಲ. ಅದು ಬೆದೆಗೆ ಬಂದಾಗ ಅದನ್ನು ಇಷ್ಟಪಡುವ ಪ್ರತಿಯೊಂದು ಗಂಡು ಕತ್ತೆಗೆ ಅದು ಲಭಿಸುವುದು. ಆಗ ಅದನ್ನು ಪಡೆಯುವುದು ಬಹಳ ಸುಲಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿ ನೋಡುವ ಅಡವಿಯ ಹೆಣ್ಣು ಕಾಡುಕತ್ತೆಯ ಹಾಗಿದ್ದಿ; ಅದಕ್ಕೆ ಬೆದೆ ಏರಿದಾಗ ಯಾವ ಗಂಡು ಕತ್ತೆಯೂ ಅದನ್ನು ಬದಿಗೆ ನೂಕುವುದಿಲ್ಲ. ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಡವಿಯಲ್ಲೆ ಪಳಗಿದ, ಮದದಿಂದ ಗಾಳಿಯನ್ನು ಬುಸಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿರುವೆ. ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯೂ ಅದನ್ನು ಬದಿಗೊತ್ತುವಂತಿಲ್ಲ ಅದನ್ನು ಹುಡುಕುವವುಗಳೆಲ್ಲ ಆಯಾಸಪಡಬೇಕಾಗಿಲ್ಲ. ಅವಳ ತಿಂಗಳಲ್ಲಿ ಅವಳನ್ನು ಸುಲಭವಾಗಿ ದೊರಕಿಸಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಡವಿಯಲ್ಲಿ ಪಳಗಿದ್ದು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿದ್ದೀ; ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯು ನೂಕಿಬಿಟ್ಟೀತು? ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:24
8 ತಿಳಿವುಗಳ ಹೋಲಿಕೆ  

ಕಾಡುಕತ್ತೆಗಳು ಬೋಳುಬೆಟ್ಟಗಳ ಮೇಲೆ ನಿಂತು ನರಿಗಳಂತೆ ಗಾಳಿಯನ್ನು ಮೂಸುತ್ತವೆ. ಆದರೆ ಅವುಗಳಿಗೆ ಆಹಾರ ಕಾಣಿಸುವದಿಲ್ಲ. ಏಕೆಂದರೆ ತಿನ್ನಬಹುದಾದ ಸಸಿಗಳು ಬೆಳೆದಿಲ್ಲ.”


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.


ಕಾಡುಕತ್ತೆಯು ಮನುಷ್ಯನನ್ನು ಹೇಗೆ ಹೆರಲಾರದೋ ಅದೇ ರೀತಿಯಲ್ಲಿ ದಡ್ಡನು ಎಂದಿಗೂ ಜ್ಞಾನಿಯಾಗಲಾರನು.


ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.


ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತುಕೊಂಡಿರುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ಅವುಗಳು ಹುಟ್ಟುವುದಕ್ಕೆ ಸರಿಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ?


ವೇಶ್ಯೆಯರು ತಮ್ಮೊಡನೆ ಕೂಡುವದಕ್ಕಾಗಿ ಪುರುಷರಿಂದ ಹಣ ವಸೂಲಿ ಮಾಡುವರು. ಆದರೆ ನಿನ್ನ ಪ್ರಿಯತಮರಿಗೆ ನೀನೇ ಹಣವನ್ನು ಕೊಟ್ಟಿರುವೆ. ನಿನ್ನೊಂದಿಗೆ ಸಂಭೋಗ ಮಾಡಲು ನೀನೇ ಅವರಿಗೆ ಹಣವನ್ನು ಕೊಟ್ಟಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು