Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:26 - ಪರಿಶುದ್ದ ಬೈಬಲ್‌

26 “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:26
18 ತಿಳಿವುಗಳ ಹೋಲಿಕೆ  

ಇಸ್ರೇಲಿನ ಮತ್ತು ಯೆಹೂದದ ಜನರು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನಾನು ಜೆರುಸಲೇಮ್ ನಗರವನ್ನು ನಾಶಮಾಡುತ್ತೇನೆ. ಜನರು, ರಾಜರು, ಮುಂದಾಳುಗಳು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು ಇವರೆಲ್ಲರೂ ನನಗೆ ಕೋಪ ಬರುವಂತೆ ಮಾಡಿದ್ದಾರೆ.


ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


“ಮೋವಾಬೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಬಂತೆ ನಟಿಸಿದೆ.


ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.


ಮುಂದಿನ ದಿವಸಗಳಲ್ಲಿ ಜನರು ತಾವು ಆರಾಧಿಸಲು ಆರಿಸಿಕೊಳ್ಳುವ ಓಕ್ ಮರಗಳಲ್ಲಿಯೂ ವಿಶೇಷವಾದ ಉದ್ಯಾನವನಗಳಲ್ಲಿಯೂ ನಾಚಿಕೆಪಡುವರು.


ಆಗ, ನೀನು ಮಾಡಿದ ಭಯಂಕರ ಕೃತ್ಯಗಳನ್ನು ನಿನ್ನ ನೆನಪಿಗೆ ತಂದುಕೊಳ್ಳುವೆ. ಆಗ ನೀನು ನಾಚಿಕೆಪಡುವೆ. ಅದೇ ಸಮಯದಲ್ಲಿ ನೀನು ನಿನ್ನ ಸಹೋದರಿಯರನ್ನು ಸಂತೈಸುವೆ.


“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ನಾನು ಆ ಸುರುಳಿಯನ್ನು ಕದಿಯುವವರ ಮನೆಗಳಿಗೂ ಮತ್ತು ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಡುವವರ ಮನೆಗಳಿಗೂ ಕಳುಹಿಸುವೆನು. ಆ ಸುರುಳಿಯು ಅಲ್ಲಿಯೇ ಇದ್ದು ಆ ಮನೆಗಳನ್ನು ನಾಶಮಾಡುವುದು. ಮನೆಯ ಕಲ್ಲುಕಂಬಗಳನ್ನು, ಮರದ ತೊಲೆಗಳನ್ನು ನಾಶಮಾಡುವದು.’”


ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.


ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.


ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು.


ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ರಾಜನು ಮತ್ತು ನಾಯಕರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಯಾಜಕರು ಭಯಪಡುವರು; ಪ್ರವಾದಿಗಳು ಬೆರಗಾಗುವರು.”


ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಬಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು