Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:27 - ಪರಿಶುದ್ದ ಬೈಬಲ್‌

27 ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನನ್ನ ಕಡೆಗೆ ಮುಖ ತಿರುಗಿಸದೆ ಬೆನ್ನುಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ - ಎದ್ದು ನಮ್ಮನ್ನುದ್ಧರಿಸು ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:27
23 ತಿಳಿವುಗಳ ಹೋಲಿಕೆ  

ಯೆಹೋವನೇ, ಕಷ್ಟ ಬಂದಾಗ ಜನರಿಗೆ ನಿನ್ನ ನೆನಪಾಗುವುದು. ನೀನು ಅವರನ್ನು ಶಿಕ್ಷಿಸಿದಾಗ ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು.


ಹೃದಯಪೂರ್ವಕವಾಗಿ ಅವರು ನನ್ನನ್ನು ಕರೆಯಲಿಲ್ಲ. ಹೌದು, ಅವರು ತಮ್ಮ ಹಾಸಿಗೆಗಳ ಮೇಲೆ ಅಳುವರು. ಆಹಾರಧಾನ್ಯ, ಹೊಸ ದ್ರಾಕ್ಷಾರಸವನ್ನು ಕೇಳುವಾಗ, ಬೇರೆಯವರ ದೇಶಗಳಲ್ಲಿ ಆಹಾರಕ್ಕಾಗಿ ಅಲೆದಾಡುವಾಗ ಅವರು ಅಳುವರು. ಆದರೆ ತಮ್ಮ ಹೃದಯಗಳಲ್ಲಿ ಅವರು ನನ್ನಿಂದ ದೂರವಾಗಿದ್ದಾರೆ.


ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”


“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


“ಆ ಜನರು ಸಹಾಯಕೋರಿ ನನ್ನಲ್ಲಿಗೆ ಬರಬೇಕಾಗಿತ್ತು. ಆದರೆ ಅವರು ನನಗೆ ವಿಮುಖರಾದರು. ನಾನು ಮತ್ತೆಮತ್ತೆ ಅವರಿಗೆ ಬುದ್ಧಿಕಲಿಸುವ ಪ್ರಯತ್ನ ಮಾಡಿದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ನಾನು ಅವರನ್ನು ತಿದ್ದುವ ಪ್ರಯತ್ನ ಮಾಡಿದೆ, ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ.


“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”


ಪೂರ್ವದಿಂದ ಬರುವ ಗಾಳಿಯಂತೆ ಯೆಹೂದದ ಜನರನ್ನು ಅವರ ವೈರಿಗಳ ಎದುರಿನಲ್ಲಿ ಚದರಿಸಿಬಿಡುವೆನು. ನಾನು ಅವರನ್ನು ನಾಶಮಾಡುವೆನು. ಆ ಸಮಯದಲ್ಲಿ ಅವರಿಗೆ ಸಹಾಯಮಾಡಲು ನಾನು ಬರುವದಿಲ್ಲ. ಇಲ್ಲ! ನಾನು ಬಿಟ್ಟುಹೋಗುವುದನ್ನು ಅವರು ನೋಡುವರು.”


ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ನೀನು ಮರುಭೂಮಿಯಲ್ಲಿ ವಾಸಿಸುವ ಕಾಡುಕತ್ತೆಯಂತೆ ಇರುವೆ. ಅದು ಬೆದೆಯ ಕಾಲದಲ್ಲಿ ಗಾಳಿಯನ್ನು ಮೂಸಿ ನೋಡುತ್ತದೆ. ಅದಕ್ಕೆ ಬೆದೆ ಏರಿದಾಗ ಯಾರೂ ಅದನ್ನು ಹಿಡಿಯಲು ಸಾಧ್ಯವಿಲ್ಲ. ಅದು ಬೆದೆಗೆ ಬಂದಾಗ ಅದನ್ನು ಇಷ್ಟಪಡುವ ಪ್ರತಿಯೊಂದು ಗಂಡು ಕತ್ತೆಗೆ ಅದು ಲಭಿಸುವುದು. ಆಗ ಅದನ್ನು ಪಡೆಯುವುದು ಬಹಳ ಸುಲಭ.


ತನ್ನ ನಡತೆಯ ಬಗ್ಗೆ ಆಕೆ ಯೋಚಿಸಲಿಲ್ಲ. ಅವಳು ತನ್ನ ದೇಶವನ್ನು ‘ಅಶುದ್ಧ’ಗೊಳಿಸಿದಳು. ಕಲ್ಲಿನ ಮತ್ತು ಮರದ ವಿಗ್ರಹಗಳನ್ನು ಪೂಜಿಸಿ ಜಾರತನ ಎಂಬ ಪಾಪವನ್ನು ಮಾಡಿದಳು.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನು ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನ್ನು ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರೆಮೀಯನೇ, ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು.”


“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.


ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಆ ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಆ ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.


ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು