ಯೆರೆಮೀಯ 2:28 - ಪರಿಶುದ್ದ ಬೈಬಲ್28 ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸಲಿ, ನೀವು ಮಾಡಿದ ವಿಗ್ರಹಗಳು ಎಲ್ಲಿವೆ? ನೀವು ಕಷ್ಟದಲ್ಲಿದ್ದಾಗ ಆ ವಿಗ್ರಹಗಳು ಬಂದು ನಿಮ್ಮನ್ನು ರಕ್ಷಿಸುವವೇ ಎಂಬುದನ್ನು ನೋಡೋಣ. ಯೆಹೂದದ ನಿವಾಸಿಗಳೇ, ನಿಮ್ಮಲ್ಲಿ ಎಷ್ಟು ಪಟ್ಟಣಗಳಿವೆಯೋ ಅಷ್ಟು ವಿಗ್ರಹಗಳಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ. ಅಧ್ಯಾಯವನ್ನು ನೋಡಿ |
ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.
ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”