ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.