Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:3 - ಪರಿಶುದ್ದ ಬೈಬಲ್‌

3 ಇಸ್ರೇಲಿನ ಜನರು ಯೆಹೋವನಿಗೆ ಒಂದು ಪವಿತ್ರವಾದ ಕಾಣಿಕೆಯಾಗಿದ್ದರು. ಅವರು ಯೆಹೋವನ ಬೆಳೆಯ ಪ್ರಥಮ ಫಲವಾಗಿದ್ದರು. ಇಸ್ರೇಲಿನ ಜನರನ್ನು ಪೀಡಿಸಲು ಪ್ರಯತ್ನಿಸಿದವರನ್ನು ಯಾರಾದರೂ ಆಗಿರಲಿ, ದೋಷಿಗಳೆಂದು ನಿರ್ಣಯಿಸಲಾಗುತ್ತಿತ್ತು. ಆ ಕೆಟ್ಟ ಜನರಿಗೆ ಕೇಡಾಗುತ್ತಿತ್ತು.’” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:3
32 ತಿಳಿವುಗಳ ಹೋಲಿಕೆ  

ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆಹೋಗುವರು.


ರೊಟ್ಟಿಯ ಮೊದಲನೇ ತುಂಡನ್ನು ದೇವರಿಗೆ ಅರ್ಪಿಸಿದಾಗ, ಇಡೀ ರೊಟ್ಟಿಯೇ ಪವಿತ್ರವಾಯಿತು. ಮರದ ಬೇರುಗಳು ಪವಿತ್ರವಾಗಿದ್ದರೆ, ಆ ಮರದ ಕೊಂಬೆಗಳು ಸಹ ಪವಿತ್ರವಾಗಿವೆ.


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.


ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.


ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.


“ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ.


ಅಲ್ಲದೆ ಅವರ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನ ಪ್ರಿಯ ಸ್ನೇಹಿತನಾದ ಎಪೈನೆತನಿಗೆ ನನ್ನ ವಂದನೆ ತಿಳಿಸಿರಿ. ಏಷ್ಯಾದಲ್ಲಿ ಕ್ರಿಸ್ತನನ್ನು ಹಿಂಬಾಲಿಸಿದವರಲ್ಲಿ ಅವನೇ ಮೊಟ್ಟಮೊದಲನೆಯವನಾಗಿದ್ದಾನೆ.


ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಆ ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”


ಇವುಗಳನ್ನು ನೀವು ನಿಮ್ಮ ಮಕ್ಕಳಿಗೆ ತಿಳಿಸುವಿರಿ. ಮತ್ತು ನಿಮ್ಮ ಮಕ್ಕಳು ಅವರ ಮಕ್ಕಳಿಗೆ ತಿಳಿಸುವರು. ಮತ್ತು ನಿಮ್ಮ ಮೊಮ್ಮಕ್ಕಳು ಅವರ ನಂತರದ ಪೀಳಿಗೆಗೆ ತಿಳಿಸುವರು.


ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”


“ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.


ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”


“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.


“ಸುಗ್ಗಿಕಾಲದಲ್ಲಿ ನೀವು ಪ್ರಥಮಫಲವಾದ ಧಾನ್ಯವನ್ನು ಮತ್ತು ನಿಮ್ಮ ಪ್ರಥಮಫಲವಾದ ದ್ರಾಕ್ಷಾರಸವನ್ನು ನನಗೆ ಕೊಡಬೇಕು. ನೀವು ಅದನ್ನು ನಿಮಗಾಗಿಯೇ ಇಟ್ಟುಕೊಳ್ಳಬಾರದು. “ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಪ್ರತಿಷ್ಠಿಸಬೇಕು.


ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.


ಯಾಕೋಬನ ಮನೆತನದವರೇ, ಯೆಹೋವನ ಸಂದೇಶವನ್ನು ಕೇಳಿರಿ. ಇಸ್ರೇಲಿನ ಎಲ್ಲಾ ಕುಲದವರೇ, ಯೆಹೋವನ ಸಂದೇಶವನ್ನು ಕೇಳಿರಿ.


ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು