Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:32 - ಪರಿಶುದ್ದ ಬೈಬಲ್‌

32 ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:32
24 ತಿಳಿವುಗಳ ಹೋಲಿಕೆ  

ಆತನು ನಮ್ಮ ಪೂರ್ವಿಕರನ್ನು ರಕ್ಷಿಸಿದರೂ ಅವರು ಆತನನ್ನು ಮರೆತುಬಿಟ್ಟರು! ಈಜಿಪ್ಟಿನಲ್ಲಿ ಮಹತ್ಕಾರ್ಯಗಳನ್ನು ಮಾಡಿದ ದೇವರನ್ನು ಅವರು ಮರೆತುಬಿಟ್ಟರು.


ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.


ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.


ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.


ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.


ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು. ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.


ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.


ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.


ಇಸ್ರೇಲಿನ ಕುವರಿಯರೇ, ಸೌಲನಿಗಾಗಿ ಗೋಳಾಡಿರಿ! ಸೌಲನು ನಿಮಗೆ ಕೆಂಪು ಬಟ್ಟೆಗಳನ್ನು ಉಡಿಸಿದನು. ಸೌಲನು ಸುವರ್ಣಾಭರಣಗಳನ್ನು ಬಟ್ಟೆಗಳ ಮೇಲೆ ತೊಡಿಸಿದನು.


ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.


ನೀವು ನನ್ನನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ. ನನ್ನನ್ನು ಗಮನಕ್ಕೇ ತರಲಿಲ್ಲ. ಹೀಗಿರಲು ನೀವು ಯಾರ ಬಗ್ಗೆ ಚಿಂತಿಸುತ್ತಿದ್ದಿರಿ? ನೀವು ಯಾರಿಗೆ ಭಯಪಡುತ್ತಿದ್ದಿರಿ? ನೀವು ಸುಳ್ಳಾಡಿದ್ದು ಯಾಕೆ? ನೋಡಿ, ನಾನು ಬಹಳ ಸಮಯದಿಂದ ಸುಮ್ಮನಿದ್ದೆನು. ಆದರೆ ನೀವು ನನ್ನನ್ನು ಗೌರವಿಸಲಿಲ್ಲ.


“ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ.


“ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು; ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು;


ಯೆಹೋವನು ಅವರನ್ನು ಅವರ ಸುತ್ತಮುತ್ತಲಿನ ಎಲ್ಲ ಶತ್ರುಗಳಿಂದ ರಕ್ಷಿಸಿದ್ದರೂ ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಜ್ಞಾಪಿಸಿಕೊಳ್ಳಲಿಲ್ಲ.


ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು