ಯೆರೆಮೀಯ 2:34 - ಪರಿಶುದ್ದ ಬೈಬಲ್34 ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು]. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.
ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ, ಅವನು ಗುಲಾಮನಾಗುವನು. ಆದರೆ ಆ ಕಳ್ಳನು ಪಶುವನ್ನು ಇನ್ನೂ ಇಟ್ಟುಕೊಂಡಿರುವುದು ನಿಮಗೆ ಗೊತ್ತಾದರೆ, ಅವನು ಕದ್ದ ಪಶುವಿಗೆ ಪ್ರತಿಯಾಗಿ ಎರಡು ಪಶುಗಳನ್ನು ಮಾಲೀಕನಿಗೆ ಕೊಡಿಸಬೇಕು. ಕದ್ದದ್ದು ಎತ್ತಾಗಿರಬಹುದು, ಕತ್ತೆಯಾಗಿರಬಹುದು ಅಥವಾ ಕುರಿಯಾಗಿರಬಹುದು. “ಕಳ್ಳನು ರಾತ್ರಿಯಲ್ಲಿ ಮನೆಗೆ ಕನ್ನ ಹಾಕಲು ಪ್ರಯತ್ನಿಸುತ್ತಿರುವಾಗ ಕೊಲ್ಲಲ್ಪಟ್ಟರೆ, ಅವನನ್ನು ಕೊಂದದ್ದಕ್ಕೆ ಯಾರೂ ತಪ್ಪಿತಸ್ಧರಾಗುವುದಿಲ್ಲ. ಆದರೆ ಇದು ಹಗಲಿನಲ್ಲಿ ನಡೆದರೆ ಕೊಂದವನು ಕೊಲೆಗಾರನಾಗುವನು.
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.