Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:36 - ಪರಿಶುದ್ದ ಬೈಬಲ್‌

36 ನಿನ್ನ ವಿಚಾರಗಳನ್ನು ಬದಲಾಯಿಸುವದು ನಿನಗೆ ಸುಲಭ. ಅಸ್ಸೀರಿಯಾ ನಿನ್ನನ್ನು ನಿರಾಶೆಗೊಳಿಸಿತು. ಆಗ ನೀನು ಅಸ್ಸೀರಿಯರನ್ನು ಬಿಟ್ಟು ಈಜಿಪ್ಟಿನ ಸಹಾಯವನ್ನು ಕೇಳಿದೆ, ಈಜಿಪ್ಟ್ ನಿನ್ನನ್ನು ನಿರಾಶೆಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಪ್ರಯತ್ನಿಸುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟೆಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:36
22 ತಿಳಿವುಗಳ ಹೋಲಿಕೆ  

ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಬದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಬರಲು ಎಷ್ಟು ಹೊತ್ತು ಕಾದುಕೊಂಡಿರುವೆ. “ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಮಾಡಿದ್ದಾನೆ. ಹೆಂಗಸು ಗಂಡಸನ್ನು ಕಾಪಾಡುವಳು.”


ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.


ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.


“ಯೆಹೂದವೇ, ‘ನಾನು ತಪ್ಪಿತಸ್ಥಳಲ್ಲವೆಂದೂ ನಾನು ಬಾಳನ ವಿಗ್ರಹಗಳನ್ನು ಪೂಜಿಸಲಿಲ್ಲವೆಂದೂ’ ನೀನು ನನಗೆ ಹೇಗೆ ಹೇಳುವೆ? ನೀನು ಕಣಿವೆಯಲ್ಲಿ ಮಾಡಿದ ಕಾರ್ಯಗಳ ಬಗ್ಗೆ ಯೋಚಿಸು. ನೀನು ಮಾಡಿದ ಕೆಲಸಗಳ ಬಗ್ಗೆ ಯೋಚಿಸು. ನೀನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಓಡಿಹೋಗುವ ತೀವ್ರಗತಿಯ ಹೆಣ್ಣು ಒಂಟೆಯಂತೆ ಇರುವೆ.


ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು.


ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”


ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.


ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.


ಇಸ್ರೇಲ್ ಜನರು ಈಜಿಪ್ಟಿನ ಮೇಲೆ ಆತುಕೊಂಡರು. ಆದರೆ ಈಜಿಪ್ಟ್ ಅವರ ಕೈಗಳನ್ನೂ ಭುಜಗಳನ್ನೂ ಗಾಯಗೊಳಿಸಿತು. ನಿನ್ನ ಸಹಾಯಕ್ಕಾಗಿ ಅವರು ನಿನ್ನನ್ನು ಆಶ್ರಯಿಸಿದರು. ಆದರೆ ನೀನು ಅವರ ಬೆನ್ನೆಲುಬನ್ನು ತಿರುಗಿಸಿ ಮುರಿದುಬಿಟ್ಟೆ.’”


ನಾವು ಈಜಿಪ್ಟಿನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡೆವು. ಸಾಕಷ್ಟು ಆಹಾರಕ್ಕಾಗಿ ನಾವು ಅಸ್ಸೀರಿಯಾದೊಡನೆ ಒಪ್ಪಂದ ಮಾಡಿಕೊಂಡೆವು.


ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.


“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.


“ಯೆಹೂದವೇ, ಪ್ರಿಯತಮನ ಬೆನ್ನುಹತ್ತಿ ಹೋಗುವದು ನಿನಗೆ ಗೊತ್ತು. ಆದಕಾರಣ ದುರಾಭ್ಯಾಸವನ್ನು ನೀನು ಕಲಿತುಕೊಂಡಿರುವೆ.


ಯೆಹೂದದ ಜನರೇ, ಅದರ ಬಗ್ಗೆ ಯೋಚಿಸಿರಿ. ಇದರಿಂದ ನಿಮಗೆ ಈಜಿಪ್ಟಿಗೆ ಹೋಗಲು ಸಹಾಯವಾಯಿತೇ? ನೈಲ್ ನದಿಯ ನೀರನ್ನು ಕುಡಿಯಲು ಈಜಿಪ್ಟಿಗೆ ಹೋಗುವುದೇಕೆ? ಅವರ ನದಿಯ ನೀರನ್ನು ಕುಡಿಯಲು ಅಸ್ಸೀರಿಯಕ್ಕೆ ಹೋಗುವುದೇಕೆ?


ಜನರು ಇಥಿಯೋಪ್ಯದ ಕಡೆಗೆ ಸಹಾಯಕ್ಕಾಗಿ ನೋಡುವರು. ಅವರು ಕಂಗೆಟ್ಟು ಹೋಗುವರು. ಈಜಿಪ್ಟಿನ ಮಹಿಮೆಯನ್ನು ಗಮನಿಸಿದವರು ಈಗ ನಾಚಿಕೆಯಲ್ಲಿ ಬೀಳುವರು” ಎನ್ನುವನು.


ಬೇರೆ ಜನಾಂಗಗಳು ನೀನು ಗೋಳಾಡುವದನ್ನು ಕೇಳಿಸಿಕೊಳ್ಳುವವು. ನಿನ್ನ ಗೋಳಾಟವು ಇಡೀ ಭೂಮಂಡಲದಲ್ಲೆಲ್ಲ ಕೇಳಿಸುವುದು. ‘ಒಬ್ಬ ಶೂರ ಸೈನಿಕನು’ ಮತ್ತೊಬ್ಬ ‘ಶೂರ ಸೈನಿಕನನ್ನು’ ಎದುರಿಸುವನು. ಆ ಶೂರ ಸೈನಿಕರಿಬ್ಬರೂ ಒಟ್ಟಿಗೆ ನೆಲಕ್ಕೆ ಬೀಳುವರು.”


ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.


“ಯೆಹೂದವೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೊ, ನಿನ್ನ ಧ್ವನಿಯು ಬಾಷಾನ್ ಪರ್ವತಗಳಲ್ಲಿ ಕೇಳಿಸಲಿ. ಅಬಾರೀಮಿನಲ್ಲಿ ಅರಚಿಕೊ; ಏಕೆಂದರೆ ನಿನ್ನ ‘ಪ್ರಿಯತಮರೆಲ್ಲರನ್ನೂ’ ನಾಶಮಾಡಲಾಗುವುದು.


ಯೆಹೂದವೇ, ನನ್ನ ದಂಡನೆಯು ಒಂದು ಬಿರುಗಾಳಿಯಂತೆ ಬರುವುದು. ಅದು ನಿನ್ನ ಎಲ್ಲಾ ಕುರುಬರನ್ನು (ನಾಯಕರನ್ನು) ಹಾರಿಸಿಕೊಂಡು ಹೋಗುವುದು. ಯಾವುದಾದರೂ ಬೇರೆ ಜನಾಂಗ ನಿನಗೆ ಸಹಾಯಮಾಡಬಹುದೆಂದು ನೀನು ಭಾವಿಸಿಕೊಂಡಿರುವೆ. ಆದರೆ ಆ ಜನಾಂಗಗಳನ್ನೂ ಸೋಲಿಸಲಾಗುವುದು. ಆಗ ನಿನಗೆ ನಿಜವಾಗಿಯೂ ಆಶಾಭಂಗವಾಗುವುದು. ನೀನು ಮಾಡಿದ ಎಲ್ಲಾ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು