5 ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮ ಪೂರ್ವಿಕರಿಗೆ ಅನ್ಯಾಯ ಮಾಡಿದೆನೇ? ಅದಕ್ಕಾಗಿ ಅವರು ನನ್ನನ್ನು ತಿರಸ್ಕರಿಸಿದರೇ? ನಿಮ್ಮ ಪೂರ್ವಿಕರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿ ತಾವು ಸಹ ನಿಷ್ಪ್ರಯೋಜಕರಾದರು.
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.
ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.
ವಿಗ್ರಹಗಳು ಕೇವಲ ಪ್ರತಿಮೆಗಳಷ್ಟೇ. ಅವು ನಿಮಗೆ ಸಹಾಯ ಮಾಡಲಾರವು. ಆದ್ದರಿಂದ ಅವುಗಳನ್ನು ಪೂಜಿಸಬೇಡಿ. ವಿಗ್ರಹಗಳು ನಿಮಗೆ ಸಹಾಯ ಮಾಡಲಾರವು ಮತ್ತು ರಕ್ಷಿಸಲಾರವು. ಅವುಗಳಿಂದ ಪ್ರಯೋಜನವೇನೂ ಇಲ್ಲ.
ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ! ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು.
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?
“ನರಪುತ್ರನೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರು ನಿನ್ನ ಸಹೋದರರ, ನಿನ್ನ ಸ್ವಂತ ಸಂಬಂಧಿಕರ ಮತ್ತು ಇಡೀ ಇಸ್ರೇಲ್ ವಂಶದವರ ಬಗ್ಗೆ ಈಗ ಮಾತಾಡುತ್ತಿದ್ದಾರೆ. ‘ಅವರು, ಯೆಹೋವನಿಂದ ದೂರವಾಗಿದ್ದಾರೆ. ಈ ದೇಶವು ನಮಗೆ ನಮ್ಮ ಸ್ವಂತ ಆಸ್ತಿಯಾಗಿ ಕೊಡಲ್ಪಟ್ಟಿದೆ’ ಎಂದು ಅವರು ಹೇಳುತ್ತಾರೆ.
ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ.
ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು.’ ಇದೇ ನನ್ನ ಉದ್ದೇಶ