Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:6 - ಪರಿಶುದ್ದ ಬೈಬಲ್‌

6 ‘ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ಮರಳುಗಾಡಿನಿಂದ ನಮ್ಮನ್ನು ಕರೆದುಕೊಂಡು ಬಂದ ಯೆಹೋವನು ಎಲ್ಲಿದ್ದಾನೆ? ನಿರ್ಜನವಾದ ಬೆಟ್ಟಪ್ರದೇಶದಿಂದ ನಮ್ಮನ್ನು ತಂದ ಯೆಹೋವನು ಎಲ್ಲಿದ್ದಾನೆ? ಎಂದು ನಿಮ್ಮ ಪೂರ್ವಿಕರು ಸ್ಮರಿಸಲಿಲ್ಲ. ಯೆಹೋವನು ನಮ್ಮನ್ನು ಅಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಿಂದ ಕರೆದುತಂದನು. ಆ ಭೂಮಿಯ ಮಾರ್ಗವಾಗಿ ಯಾರೂ ಪ್ರಯಾಣ ಮಾಡುವುದಿಲ್ಲ. ಯಾರೂ ಆ ಭೂಮಿಯ ಮೇಲೆ ವಾಸ ಮಾಡುವದಿಲ್ಲ. ಈಗ ಆ ಯೆಹೋವನು ಎಲ್ಲಿದ್ದಾನೆ?’” ನಿಮ್ಮ ಪೂರ್ವಿಕರು ಆ ಪ್ರಶ್ನೆಗಳನ್ನು ಕೇಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:6
26 ತಿಳಿವುಗಳ ಹೋಲಿಕೆ  

“ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.


“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.


ಜನರು ಕತ್ತಲಲ್ಲಿ ಜೀವಿಸುತ್ತಿದ್ದರು. ಆಗ ಅವರಿಗೆ ದೊಡ್ಡ ಬೆಳಕೊಂದು ಕಾಣಿಸಿತು. ಸಮಾಧಿಯಂತಿರುವ ಕಾರ್ಗತ್ತಲೆಯ ದೇಶದಲ್ಲಿ ವಾಸಿಸುವ ಆ ಜನರಿಗೆ ಬೆಳಕು ದೊರೆಯಿತು.”


ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.


ಜನರು ಆಣೆ ಮಾಡುವಾಗ ‘ಯೆಹೋವನಾಣೆ’ ಎಂದು ಹೇಳುವರು. ಆದರೆ ಅದು ಕೇವಲ ಬಾಯಿ ಮಾತಷ್ಟೇ ಹೊರತು ಯಥಾರ್ಥವಾದದ್ದಲ್ಲ.”


“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


“ಯೆರೆಮೀಯನೇ, ಹೋಗಿ ಜೆರುಸಲೇಮಿನ ಜನರೊಂದಿಗೆ ಮಾತನಾಡು, ಅವರಿಗೆ ಹೀಗೆ ಹೇಳು: “ಯೆಹೋವನು ಹೀಗೆನ್ನುತ್ತಾನೆ: ‘ನೀವು ಯುವ ರಾಷ್ಟ್ರವಾಗಿದ್ದಾಗ ನನಗೆ ನಂಬಿಗಸ್ತರಾಗಿದ್ದಿರಿ; ಯುವತಿಯಾದ ಮದುಮಗಳಂತೆ ನನ್ನನ್ನು ಹಿಂಬಾಲಿಸಿದಿರಿ. ಎಂದೂ ಬೇಸಾಯಕ್ಕೆ ಬಳಸದ ಭೂಮಿಯಲ್ಲಿಯೂ ಮರಳುಗಾಡಿನಲ್ಲಿಯೂ ನನ್ನನ್ನು ಹಿಂಬಾಲಿಸಿದಿರಿ.


ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಹಿಂದಿನಕಾಲದ ಬಗ್ಗೆ ಯೋಚಿಸತೊಡಗಿದೆನು. ಬಹುಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ಯೋಚಿಸತೊಡಗಿದೆನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.


ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.


ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.


ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.


ಆಗ ಗಿದ್ಯೋನನು, “ಸ್ವಾಮೀ, ಯೆಹೋವನು ನಮ್ಮ ಸಂಗಡವಿದ್ದರೆ ನಮಗೆ ಇಷ್ಟೊಂದು ಕಷ್ಟಗಳೇಕೆ ಬರುತ್ತವೆ? ನಮ್ಮ ಪೂರ್ವಿಕರಿಗಾಗಿ ಆತನು ಬಹಳಷ್ಟು ಅದ್ಭುತಕಾರ್ಯಗಳನ್ನು ಮಾಡಿದ್ದನೆಂದು ನಾವು ಕೇಳಿದ್ದೇವೆ. ಆತನು ಅವರನ್ನು ಈಜಿಪ್ಟಿನಿಂದ ಹೊರಗೆ ಕರೆತಂದನೆಂದು ನಮ್ಮ ಪೂರ್ವಿಕರು ನಮಗೆ ಹೇಳಿದರು. ಆದರೆ ಈಗ ಯೆಹೋವನು ನಮ್ಮನ್ನು ಕೈಬಿಟ್ಟಿದ್ದಾನೆ; ಮಿದ್ಯಾನ್ಯರು ನಮ್ಮನ್ನು ಸೋಲಿಸುವಂತೆ ಮಾಡಿದ್ದಾನೆ” ಎಂದು ಹೇಳಿದನು.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


“ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.


ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.


“ಆ ಜನರು ಯೆಹೋವನ ಬಗ್ಗೆ ಸುಳ್ಳು ಹೇಳಿದ್ದಾರೆ. ‘ಯೆಹೋವನು ನಮಗೇನೂ ಮಾಡುವುದಿಲ್ಲ. ನಮಗೆ ಕೆಟ್ಟದ್ದೇನೂ ಆಗುವದಿಲ್ಲ. ಯಾವ ಸೈನ್ಯವೂ ನಮ್ಮ ಮೇಲೆ ಧಾಳಿ ಮಾಡುವುದಿಲ್ಲ; ನಾವೆಂದೂ ಉಪವಾಸಬೀಳುವದಿಲ್ಲ’ ಎಂದು ಅವರು ಹೇಳಿದ್ದಾರೆ.


“ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು