ಯೆರೆಮೀಯ 20:1 - ಪರಿಶುದ್ದ ಬೈಬಲ್1 ಪಷ್ಹೂರನೆಂಬುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಧಿಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನ್ನು ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆರೆಮೀಯನು ಈ ಪ್ರವಾದನೆ ಮಾಡುವುದನ್ನು ಯಾಜಕನಾದ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆರೆಮೀಯ ಈ ಪ್ರವಾದನೆ ಮಾಡುವುದನ್ನು ಇಮ್ಮೇರನ ಮಗ ಹಾಗು ಸರ್ವೇಶ್ವರನ ಆಲಯದ ಮುಖ್ಯಾಧಿಕಾರಿಯಾದ ಯಾಜಕ ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆರೆಮೀಯನು ಈ ಪ್ರವಾದನೆ ಮಾಡುವದನ್ನು ಯಾಜಕ ಇಮ್ಮೇರನ ಮಗನೂ ಯೆಹೋವನ ಆಲಯದ ಮುಖ್ಯಾಧಿಕಾರಿಯೂ ಆದ ಪಷ್ಹೂರನು ಕೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆರೆಮೀಯನು ಈ ಮಾತುಗಳನ್ನು ಪ್ರವಾದಿಸಲಾಗಿ, ಯೆಹೋವ ದೇವರ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗ ಪಷ್ಹೂರನು ಕೇಳಿದನು. ಅಧ್ಯಾಯವನ್ನು ನೋಡಿ |
ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”