ಯೆರೆಮೀಯ 20:10 - ಪರಿಶುದ್ದ ಬೈಬಲ್10 ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.” ಅಧ್ಯಾಯವನ್ನು ನೋಡಿ |
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.
ಆದರೆ ಯೆರೆಮೀಯನು ಜೆರುಸಲೇಮಿನ ಬೆನ್ಯಾಮೀನ್ ಹೆಬ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನ್ನು ಹಿಡಿದುಕೊಂಡನು. ಆ ಮುಖ್ಯಸ್ಥನ ಹೆಸರು ಇರೀಯ. ಇರೀಯನು ಶೆಲೆಮ್ಯನ ಮಗನು; ಶೆಲೆಮ್ಯನು ಹನನ್ಯನ ಮಗನು. ಮುಖ್ಯಸ್ಥನಾದ ಇರೀಯನು ಯೆರೆಮೀಯನನ್ನು ಹಿಡಿದುಕೊಂಡು, “ಯೆರೆಮೀಯನೇ, ನೀನು ಬಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನ್ನು ಬಿಟ್ಟುಹೋಗುತ್ತಿರುವೆ” ಎಂದನು.
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.