ಯೆರೆಮೀಯ 20:11 - ಪರಿಶುದ್ದ ಬೈಬಲ್11 ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು. ಅಧ್ಯಾಯವನ್ನು ನೋಡಿ |
ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.