Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:12 - ಪರಿಶುದ್ದ ಬೈಬಲ್‌

12 ಸರ್ವಶಕ್ತನಾದ ಯೆಹೋವನೇ, ನೀನು ಒಳ್ಳೆಯವರನ್ನು ಪರೀಕ್ಷಿಸುವೆ. ನೀನು ಒಬ್ಬ ವ್ಯಕ್ತಿಯ ಹೃದಯವನ್ನು ಮತ್ತು ಬುದ್ಧಿಯನ್ನು ಆಳವಾಗಿ ಪರೀಕ್ಷಿಸಿನೋಡುವೆ. ನಾನು ಅವರ ವಿರುದ್ಧ ನನ್ನ ಅಭಿಪ್ರಾಯಗಳನ್ನು ನಿನಗೆ ತಿಳಿಸಿದ್ದೇನೆ. ನೀನು ಅವರಿಗೆ ತಕ್ಕ ಶಿಕ್ಷೆಯನ್ನು ವಿಧಿಸಿರುವದನ್ನು ನನ್ನ ಕಣ್ಣುಗಳು ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆ ಮಾಡಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:12
26 ತಿಳಿವುಗಳ ಹೋಲಿಕೆ  

ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಬೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ಯಾಕೆಂದರೆ ನನ್ನೆಲ್ಲಾ ಆಪತ್ತುಗಳಿಂದ ರಕ್ಷಿಸಿದಾತನು ನೀನೇ. ನನ್ನ ವೈರಿಗಳಿಗಾದ ಸೋಲನ್ನು ನಾನು ಕಣ್ಣಾರೆ ಕಂಡೆನು.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು.


ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ಹಿಜ್ಕೀಯನು ಆ ದೂತರ ಕೈಗಳಿಂದ ಪತ್ರಗಳನ್ನು ತೆಗೆದುಕೊಂಡು ಓದಿದನು. ಅನಂತರ ನೇರವಾಗಿ ಯೆಹೋವನ ಆಲಯಕ್ಕೆ ಹೋಗಿ ಆ ಪತ್ರವನ್ನು ಯೆಹೋವನ ಮುಂದಿಟ್ಟನು.


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.


ಪರಲೋಕವೇ, ಇದರಿಂದ ನೀನೂ ಸಂತೋಷಪಡು! ದೇವರ ಪರಿಶುದ್ಧ ಜನರೇ, ಅಪೊಸ್ತಲರೇ, ಪ್ರವಾದಿಗಳೇ, ನೀವೂ ಸಂತೋಷಪಡಿರಿ! ಅವಳು ನಿಮಗೆ ಮಾಡಿದ ಕೇಡುಗಳಿಗಾಗಿ ದೇವರು ಅವಳನ್ನು ದಂಡಿಸಿದನು.’”


ಈ ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ನನ್ನ ‘ಸ್ವಾಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.


ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು. ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು. ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”


ಯೆಹೋವನೇ, ನನ್ನ ಜೀವಿತವನ್ನು ನಿನ್ನ ಕೈಗಳಲ್ಲಿಟ್ಟಿದ್ದೇನೆ. ನಿನ್ನ ಸೇವಕನಾದ ನನ್ನನ್ನು ಸಂತೋಷಗೊಳಿಸು.


ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.


ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು