Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:5 - ಪರಿಶುದ್ದ ಬೈಬಲ್‌

5 ಸಂಪತ್ತನ್ನು ಸಂಗ್ರಹಿಸಿ ಸಿರಿವಂತರಾಗಲು ಜೆರುಸಲೇಮಿನ ಜನರು ಬಹಳ ಕಷ್ಟಪಟ್ಟು ದುಡಿದರು. ಆದರೆ ನಾನು ಅದೆಲ್ಲವನ್ನು ಅವರ ವೈರಿಗಳಿಗೆ ಒಪ್ಪಿಸುವೆನು. ಜೆರುಸಲೇಮಿನ ರಾಜನ ಬಳಿ ಅನೇಕ ನಿಧಿನಿಕ್ಷೇಪಗಳಿವೆ. ಆದರೆ ನಾನು ಆ ನಿಧಿನಿಕ್ಷೇಪಗಳನ್ನೆಲ್ಲಾ ವೈರಿಗೆ ಒಪ್ಪಿಸುತ್ತೇನೆ. ವೈರಿಯು ಅವುಗಳನ್ನು ಬಾಬಿಲೋನ್ ದೇಶಕ್ಕೆ ತೆಗೆದುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ, ಆದಾಯವನ್ನೂ ಮತ್ತು ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿ, ನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:5
24 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.


ಯೆಹೂದದ ಜನರಲ್ಲಿ ಅನೇಕ ಭಂಡಾರಗಳಿವೆ. ಆ ಭಂಡಾರಗಳನ್ನು ನಾನು ಬೇರೆಯವರಿಗೆ ಒಪ್ಪಿಸುತ್ತೇನೆ. ಬೇರೆಯವರು ಆ ಭಂಡಾರಗಳನ್ನು ಹಣ ಕೊಟ್ಟು ತೆಗೆದುಕೊಳ್ಳಬೇಕಾಗಿಲ್ಲ. ನಾನು ಅವರಿಗೆ ಅವುಗಳನ್ನು ಉಚಿತವಾಗಿ ಕೊಟ್ಟುಬಿಡುತ್ತೇನೆ. ಏಕೆಂದರೆ ಯೆಹೂದವು ಅನೇಕ ಪಾಪಗಳನ್ನು ಮಾಡಿದೆ. ದೇಶದ ಪ್ರತಿಯೊಂದು ಭಾಗದಲ್ಲಿಯೂ ಯೆಹೂದ ಪಾಪಮಾಡಿದೆ.


ಶತ್ರು ತನ್ನ ಕೈಗಳನ್ನು ಚಾಚಿದನು. ಅವಳ ಎಲ್ಲ ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡನು. ಯೆಹೋವನೇ, ಆ ಜನರು ನಿನ್ನ ಸಭೆಯನ್ನು ಪ್ರವೇಶಿಸಬಾರದೆಂದು ನೀನು ಆಜ್ಞಾಪಿಸಿದ್ದರೂ ಪರಕೀಯರು ತನ್ನ ಪವಿತ್ರಾಲಯವನ್ನು ಪ್ರವೇಶಿಸುವದನ್ನು ಅವಳು ನೋಡಬೇಕಾಯಿತು.


ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.


ವಸಂತ ಕಾಲದಲ್ಲಿ ನೆಬೂಕದ್ನೆಚ್ಚರನು ತನ್ನ ಸೇವಕರನ್ನು ಕಳುಹಿಸಿ ಯೆಹೋಯಾಕೀನನನ್ನು ಕರೆಯಿಸಿದನು. ಆ ಸೇವಕರು ದೇವಾಲಯದ ಕೆಲವು ವಸ್ತುಗಳನ್ನೂ ಅವನ ಜೊತೆಯಲ್ಲಿ ಬಾಬಿಲೋನಿಗೆ ತೆಗೆದುಕೊಂಡು ಹೋದರು. ನೆಬೂಕದ್ನೆಚ್ಚರನು ಯೆಹೂದ ಮತ್ತು ಜೆರುಸಲೇಮಿಗೆ ಚಿದ್ಕೀಯನನ್ನು ಹೊಸ ಅರಸನನ್ನಾಗಿ ಮಾಡಿದನು. ಚಿದ್ಕೀಯನು ಯೆಹೋಯಾಕೀನನ ಸಂಬಂಧಿಕನಾಗಿದ್ದನು.


ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಅವನು ಆಲಯದ ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಆ ಸಾಮಾಗ್ರಿಗಳನ್ನು ಅವನು ತನ್ನ ವಿಗ್ರಹಾಲಯದಲ್ಲಿಟ್ಟನು.


ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಭೂಲೋಕದ ರಾಜರಿಗೆ ಆಗಲಿಲ್ಲ. ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಲೋಕದ ಜನರಿಗೆ ಆಗಲಿಲ್ಲ. ಜೆರುಸಲೇಮ್ ಪಟ್ಟಣದ ಬಾಗಿಲುಗಳ ಮೂಲಕ ವೈರಿಗಳು ಬಂದರೆಂಬುದನ್ನು ಅವರಿಗೆ ನಂಬಲೂ ಆಗಲಿಲ್ಲ.


ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.


ಬಾಬಿಲೋನಿನ ಸೈನಿಕರು ಅರಮನೆಗೂ ಮತ್ತು ಜೆರುಸಲೇಮಿನ ಉಳಿದ ನಿವಾಸಿಗಳ ಮನೆಗಳಿಗೂ ಬೆಂಕಿಯಿಟ್ಟರು. ಜೆರುಸಲೇಮಿನ ಗೋಡೆಗಳನ್ನು ಕೆಡವಿದರು.


ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೇ ದಿನದಂದು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆಯಲಾಯಿತು.


ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.


ವಿನಾಶನದ ಮೇಲೆ ವಿನಾಶವು ಬಂದು ಇಡೀ ದೇಶವೇ ಹಾಳಾಗಿದೆ. ಫಕ್ಕನೆ ನನ್ನ ಗುಡಾರಗಳು ಹಾಳಾದವು. ನನ್ನ ಪರದೆಗಳು ಹರಿದುಹೋದವು.


ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.


‘ನಿನ್ನ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ನಿನ್ನ ಪೂರ್ವಿಕರು ಕೂಡಿಟ್ಟಿದ್ದ ಎಲ್ಲಾ ವಸ್ತುಗಳೂ ಇಲ್ಲಿಂದ ಬಾಬಿಲೋನಿಗೆ ಒಯ್ಯುವ ಕಾಲವು ಬರುವದು. ಇಲ್ಲಿ ಏನೂ ಉಳಿಯುವದಿಲ್ಲ.’ ಇದು ಸರ್ವಶಕ್ತನಾದ ಯೆಹೋವನ ನುಡಿ.


“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.


ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು