Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:6 - ಪರಿಶುದ್ದ ಬೈಬಲ್‌

6 ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:6
25 ತಿಳಿವುಗಳ ಹೋಲಿಕೆ  

ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕೃತ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.


“ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ.


ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.


ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು.


ಈ ಜನರು ನನ್ನ ಮಾತುಗಳನ್ನು ಕೇಳಲು ಇಷ್ಟಪಡುವದಿಲ್ಲ. ಆದರೆ ಬೇರೊಬ್ಬನ ಸುಳ್ಳು ಮಾತುಗಳನ್ನು ಕೇಳಲು ಇಷ್ಟಪಡುವರು. ಸುಳ್ಳು ಪ್ರವಾದಿಯು ಬಂದು, “ನಿಮಗೆ ಒಳ್ಳೆಯ ಭವಿಷ್ಯವಿದೆ. ಬೇಕಾದಷ್ಟು ದ್ರಾಕ್ಷಾರಸ, ಮದ್ಯವು ನಿಮಗೆ ದೊರಕುವವು” ಎಂದು ಹೇಳಿದರೆ ಅವರು ಅವನನ್ನು ನಂಬಿ ಸ್ವೀಕರಿಸಿಕೊಳ್ಳುವರು.


ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”


ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


“ನಿಮ್ಮ ವೈರಿಗಳು ಬಂದು ನಿಮ್ಮನ್ನು ಸೋಲಿಸಿಬಿಡುವಂತೆ ಮಾಡುವನು. ನೀವು ಒಂದು ದಾರಿಯಿಂದ ನಿಮ್ಮ ವೈರಿಗೆ ಎದುರಾಗಿ ಯುದ್ಧಕ್ಕೆ ಇಳಿದರೆ ಏಳುದಾರಿಗಳಿಂದ ರಣರಂಗದಿಂದ ಪಲಾಯನ ಮಾಡುವಿರಿ. ನಿಮಗೆ ಸಂಭವಿಸುವ ಬಾಧೆಗಳನ್ನು ನೋಡಿ ಇತರ ಜನಾಂಗದವರು ಭಯಪಡುವರು.


ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.


ಪಷ್ಹೂರನೆಂಬುವನು ಯಾಜಕನಾಗಿದ್ದನು. ಅವನು ಯೆಹೋವನ ಆಲಯದ ಮುಖ್ಯಾಧಿಕಾರಿಯಾಗಿದ್ದನು. ಪಷ್ಹೂರನು ಇಮ್ಮೇರನ ಮಗನು. ಯೆಹೋವನ ಆಲಯದ ಪ್ರಾಕಾರದಲ್ಲಿ ಯೆರೆಮೀಯನು ಮಾಡಿದ ಪ್ರವಾದನೆಯನ್ನು ಪಷ್ಹೂರನು ಕೇಳಿದನು.


ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು.


ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು