Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:8 - ಪರಿಶುದ್ದ ಬೈಬಲ್‌

8 ನಾನು ಮಾತನಾಡಿದಾಗಲೆಲ್ಲ ಕೂಗಿಕೂಗಿ ಹೇಳುತ್ತೇನೆ. ನಾನು ಯಾವಾಗಲೂ ಹಿಂಸೆ ಮತ್ತು ವಿನಾಶದ ಬಗ್ಗೆ ಕೂಗಿಕೊಳ್ಳುತ್ತೇನೆ. ಯೆಹೋವನಿಂದ ಬಂದ ಸಂದೇಶದ ಬಗ್ಗೆ ಜನರಿಗೆ ಹೇಳುತ್ತೇನೆ. ಆದರೆ ಜನರು ಯಾವಾಗಲೂ ನನಗೆ ಅವಮಾನ ಮಾಡುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಮಾತನಾಡುವುದೆಲ್ಲಾ ಅರಚಾಟವೇ. “ಬಲಾತ್ಕಾರ, ಕೊಳ್ಳೆ” ಎಂದೇ ಕೂಗಿಕೊಳ್ಳುತ್ತೇನೆ. ನಾನು ಸಾರುವ ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸ್ಯಕ್ಕೂ ಗುರಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಮಾತಾಡುವದೆಲ್ಲಾ ಅರಚಾಟವೇ; ಬಲಾತ್ಕಾರ, ಕೊಳ್ಳೆ ಎಂದೇ ಕೂಗಿಕೊಳ್ಳುತ್ತೇನೆ; [ನಾನು ಸಾರುವ] ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸಕ್ಕೂ ಗುರಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ನಾನು ಮಾತನಾಡುವವನಾದ್ದರಿಂದ ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:8
26 ತಿಳಿವುಗಳ ಹೋಲಿಕೆ  

ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.


ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.


ಈಜಿಪ್ಟಿನ ಭಂಡಾರವನ್ನೆಲ್ಲ ಪಡೆಯುವುದಕ್ಕಿಂತ ಕ್ರಿಸ್ತನಿಗಾಗಿ ಸಂಕಟವನ್ನು ಅನುಭವಿಸುವುದು ಶ್ರೇಯಸ್ಕರವೆಂದು ಅವನು ಭಾವಿಸಿದನು. ದೇವರು ತನಗೆ ನೀಡುವ ಪ್ರತಿಫಲಕ್ಕಾಗಿ ಅವನು ಕಾಯುತ್ತಿದ್ದನು.


ಧರ್ಮೋಪದೇಶಕನೊಬ್ಬನು ಯೇಸುವಿಗೆ, “ಬೋಧಕನೇ, ನೀನು ಫರಿಸಾಯರ ಕುರಿತಾಗಿ ಈ ಸಂಗತಿಗಳನ್ನು ಹೇಳಿದಾಗ ನಮ್ಮನ್ನು ಸಹ ಖಂಡಿಸಿದಂತಾಯಿತು” ಎಂದು ಹೇಳಿದನು.


ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಬಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.


“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”


ನೀವು ಕದಿಯುವುದಿಲ್ಲವೇ? ಕೊಲೆಗಳನ್ನು ಮಾಡುವುದಿಲ್ಲವೇ? ನೀವು ವ್ಯಭಿಚಾರ ಮಾಡುವುದಿಲ್ಲವೇ? ನೀವು ಅನ್ಯರ ಮೇಲೆ ಸುಳ್ಳು ದೋಷಾರೋಪಣೆ ಮಾಡುವುದಿಲ್ಲವೇ? ನೀವು ಸುಳ್ಳುದೇವರಾದ ಬಾಳನನ್ನು ಪೂಜಿಸಿ ಅನ್ಯದೇವರುಗಳ ಅನುಯಾಯಿಗಳಾಗಿಲ್ಲವೇ?


ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.


ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.


ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.


ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.


ಎಲೀಷನು ಆ ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.


ನೀವು ಸುಳ್ಳುಹೇಳುವ ದುಷ್ಟಮಕ್ಕಳು. ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. ನನ್ನನ್ನು ಹಿಯಾಳಿಸುತ್ತೀರಿ; ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು