Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:9 - ಪರಿಶುದ್ದ ಬೈಬಲ್‌

9 ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:9
21 ತಿಳಿವುಗಳ ಹೋಲಿಕೆ  

ನಾನು ಬಹುಕೋಪಗೊಂಡಿದ್ದೆ. ಅದರ ಕುರಿತು ಆಲೋಚಿಸಿದಷ್ಟೂ ಕೋಪವು ಅಧಿಕವಾಯಿತು. ಆಗ ನಾನು ಬಾಯಿತೆರೆದು,


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ಪೌಲನು ಅಥೆನ್ಸಿನಲ್ಲಿ ಸೀಲ ತಿಮೊಥೆಯರಿಗಾಗಿ ಎದುರು ನೋಡುತ್ತಿದ್ದನು. ಆ ಪಟ್ಟಣದ ಎಲ್ಲೆಲ್ಲಿಯೂ ವಿಗ್ರಹಗಳಿರುವುದನ್ನು ಕಂಡು ಅವನ ಮನಸ್ಸು ನೊಂದುಹೋಯಿತು.


ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.


ಯೇಸು, “ನೇಗಿಲಿನ ಮೇಲೆ ಕೈಯನ್ನು ಹಾಕಿ ಹಿಂತಿರುಗಿ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಅಂದನು.


ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.


ಅಯ್ಯೋ, ನನ್ನ ದುಃಖ ಮತ್ತು ಚಿಂತೆ ನನ್ನ ಹೊಟ್ಟೆಯಲ್ಲಿ ಸಂಕಟವನ್ನು ಉಂಟುಮಾಡುತ್ತಿವೆ. ನೋವಿನಿಂದ ನಾನು ಬಾಗಿಹೋಗಿದ್ದೇನೆ. ನಾನು ತುಂಬ ಹೆದರಿಕೊಂಡಿದ್ದೇನೆ. ನನ್ನ ಹೃದಯವು ಒಳಗೆ ತಳಮಳಗೊಳ್ಳುತ್ತಿದೆ. ನಾನು ಬಾಯಿ ಮುಚ್ಚಿಕೊಂಡಿರಲಾರೆ. ಏಕೆಂದರೆ, ನಾನು ತುತ್ತೂರಿಯ ಶಬ್ದವನ್ನು ಕೇಳಿದ್ದೇನೆ. ಆ ತುತ್ತೂರಿಯು ಸೈನ್ಯವನ್ನು ಯುದ್ಧಕ್ಕೆ ಕರೆಯುತ್ತಿದೆ.


ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.


ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ.


ಆಗ ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಈ ಸುರುಳಿಯನ್ನು ನಿನಗೆ ಕೊಡುತ್ತೇನೆ. ಇದನ್ನು ನುಂಗು. ಇದು ನಿನ್ನ ಹೊಟ್ಟೆಯನ್ನು ತುಂಬಲಿ.” ಆಗ ನಾನು ಆ ಸುರುಳಿಯನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನುತುಪ್ಪದ ಸಿಹಿಯಂತೆ ರುಚಿಯಾಗಿತ್ತು.


ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.


“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು