ಯೆರೆಮೀಯ 21:1 - ಪರಿಶುದ್ದ ಬೈಬಲ್1 ಯೆಹೋವನಿಂದ ಯೆರೆಮೀಯನಿಗೆ ಈ ಸಂದೇಶ ಬಂದಿತು. ಯೆಹೂದದ ರಾಜನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನಾದ ಯಾಜಕ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿದಾಗ ಈ ಸಂದೇಶ ಬಂದಿತು. ಪಷ್ಹೂರ ಮತ್ತು ಚೆಫನ್ಯರು ಯೆರೆಮೀಯನಿಗೆ ರಾಜನ ಸಂದೇಶವನ್ನು ತಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಯಾಜಕ ಮಾಸೇಯನ ಮಗನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.
“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.