ಯೆರೆಮೀಯ 21:13 - ಪರಿಶುದ್ದ ಬೈಬಲ್13 “ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಹಾ, ತಗ್ಗಿನ ನಗರಿಯೇ, ಪ್ರಸ್ಥಭೂವಿುಯ ಶಿಖರದ ಮೇಲಣ ಪುರಿಯೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಯಾರು ಇಳಿದು ನಮ್ಮ ಮೇಲೆ ಬಂದಾರು, ನಮ್ಮ ನಿವಾಸಗಳಲ್ಲಿ ಯಾರು ನುಗ್ಗಿಯಾರು ಎನ್ನುವವರೇ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”