ಯೆರೆಮೀಯ 21:14 - ಪರಿಶುದ್ದ ಬೈಬಲ್14 “ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ” ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.
ತಾನು ಮಹಾದೊಡ್ಡ ಜನವೆಂದು ಅಶ್ಶೂರವು ನೆನಸುತ್ತದೆ. ಆದರೆ ಸರ್ವಶಕ್ತನಾದ ಯೆಹೋವನು ಅಶ್ಶೂರದ ಮೇಲೆ ಭಯಂಕರವಾದ ವ್ಯಾಧಿಯನ್ನು ಬರಮಾಡುತ್ತಾನೆ. ಒಬ್ಬ ರೋಗಿ ತನ್ನ ಅಸ್ವಸ್ಥತೆಯಿಂದ ಹೇಗೆ ಕೃಶವಾಗುತ್ತಾನೋ ಹಾಗೆಯೇ ತನ್ನ ಶಕ್ತಿಯನ್ನೂ ಐಶ್ವರ್ಯವನ್ನೂ ಅಶ್ಶೂರವು ಕಳೆದುಕೊಂಡು ಬಲಹೀನನಾಗುವನು. ಅಶ್ಶೂರದ ಮಹಿಮಾಪ್ರಭಾವಗಳು ಇಲ್ಲದೆ ಹೋಗುವವು. ಬೆಂಕಿಯು ಸರ್ವವನ್ನು ಸುಟ್ಟು ನಾಶಮಾಡುವಂತೆ ಇರುವದು.
“‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”