ಯೆರೆಮೀಯ 21:2 - ಪರಿಶುದ್ದ ಬೈಬಲ್2 ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು. ಅಧ್ಯಾಯವನ್ನು ನೋಡಿ |
“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲೀ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.