ಯೆರೆಮೀಯ 21:3 - ಪರಿಶುದ್ದ ಬೈಬಲ್3 ಆಗ ಯೆರೆಮೀಯನು ಪಷ್ಹೂರ ಮತ್ತು ಚೆಫನ್ಯರಿಗೆ ಹೀಗೆ ಉತ್ತರಕೊಟ್ಟನು: “ರಾಜನಾದ ಚಿದ್ಕೀಯನಿಗೆ ಹೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆರೆಮೀಯನು, “ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಯೆರೆಮೀಯನಿಗೆ ಸರ್ವೇಶ್ವರನ ವಾಣಿ ಉಂಟಾಗಿ, ಆ ದೂತರಿಗೆ, “ನೀವು ಹೋಗಿ ಚಿದ್ಕೀಯನಿಗೆ ಈ ಉತ್ತರವನ್ನು ತಿಳಿಸಿರಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೆರೆಮೀಯನು ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ ಎಂದು ಅವರಿಗೆ ಹೇಳಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೆರೆಮೀಯನು ಅವರಿಗೆ ಹೇಳಿದ್ದೇನೆಂದರೆ, “ಚಿದ್ಕೀಯನಿಗೆ ಹೀಗೆ ಹೇಳಿರಿ: ಅಧ್ಯಾಯವನ್ನು ನೋಡಿ |
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.