Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:5 - ಪರಿಶುದ್ದ ಬೈಬಲ್‌

5 ಯೆಹೂದಿಗಳಾದ ನಿಮ್ಮ ವಿರುದ್ಧ ನಾನೇ ಕಾದಾಡುತ್ತೇನೆ. ನಾನು ನನ್ನ ಬಲಿಷ್ಠವಾದ ಕೈಗಳಿಂದ ನಿಮ್ಮ ವಿರುದ್ಧ ಹೋರಾಡುತ್ತೇನೆ. ನಿಮ್ಮ ಮೇಲೆ ನನಗೆ ಬಹಳ ಕೋಪ ಬಂದಿದೆ; ಅದಕ್ಕಾಗಿ ನನ್ನ ಬಲಿಷ್ಠವಾದ ತೋಳಿನಿಂದ ನಾನು ನಿಮ್ಮ ಸಂಗಡ ಯುದ್ಧ ಮಾಡುತ್ತೇನೆ. ನಾನು ನಿಮ್ಮ ವಿರುದ್ಧ ಬಹಳ ರಭಸದಿಂದ ಯುದ್ಧಮಾಡಿ ನನಗೆ ಎಷ್ಟು ಕೋಪ ಬಂದಿದೆ ಎಂಬುದನ್ನು ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೇ ಕೋಪರೋಷ ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಭುಜಪರಾಕ್ರಮದಿಂದಲೂ ನಿಮಗೆ ವಿರುದ್ಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:5
21 ತಿಳಿವುಗಳ ಹೋಲಿಕೆ  

ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು.


ಆದ್ದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.


ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.


“ದೇವರಾದ ಯೆಹೋವನೇ, ನೀನು ಭೂಮ್ಯಾಕಾಶಗಳನ್ನು ಸೃಷ್ಟಿಸಿದೆ. ಅವುಗಳನ್ನು ನೀನು ನಿನ್ನ ಅಪಾರವಾದ ಶಕ್ತಿಯಿಂದ ಸೃಷ್ಟಿಸಿದೆ. ನಿನಗೆ ಅಸಾಧ್ಯವಾದುದು ಯಾವುದೂ ಇಲ್ಲ.


ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” ಇದು ಯೆಹೋವನ ಸಂದೇಶ.


ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಜನರೆಲ್ಲರೂ ದುಷ್ಟರಾಗಿದ್ದಾರೆ. ಆದ್ದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದ್ದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.


ನಾನು ನನ್ನ ಶಕ್ತಿಯಿಂದ ನಿನಗೂ ನಿನ್ನ ಜನರಿಗೂ ವ್ಯಾಧಿಯನ್ನು ಬರಮಾಡಿ ನಿಮ್ಮನ್ನು ನಿರ್ಮೂಲ ಮಾಡಬಹುದಿತ್ತು.


‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.


ನೀವು ಕೈದಿಗಳಂತೆ ತಲೆತಗ್ಗಿಸುವಿರಿ, ಸತ್ತಹೆಣಗಳಂತೆ ನೆಲದ ಮೇಲೆ ಬೀಳುವಿರಿ. ಆದರೆ ಅದರಿಂದ ನಿಮಗೆ ಪ್ರಯೋಜನವಾಗದು. ದೇವರು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ನಿಮ್ಮನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.


ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.


ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


ಬಹುಶಃ ಆ ಜನರು ತಮಗೆ ಸಹಾಯಮಾಡೆಂದು ಯೆಹೋವನನ್ನು ಪ್ರಾರ್ಥಿಸಬಹುದು. ಆಗ ಪ್ರತಿಯೊಬ್ಬನೂ ದುಷ್ಕೃತ್ಯ ಮಾಡುವದನ್ನು ನಿಲ್ಲಿಸಬಹುದು. ಆ ಜನರ ಮೇಲೆ ತನಗೆ ಬಹಳ ಕೋಪಬಂದಿದೆ ಎಂದು ಯೆಹೋವನು ಪ್ರಕಟಿಸಿದ್ದಾನೆ.”


ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಬಾಬಿಲೋನಿನ ಎಲ್ಲಾ ಸೈನಿಕರನ್ನು ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಆ ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಬಂದು ಜೆರುಸಲೇಮನ್ನು ಸುಟ್ಟುಹಾಕುವರು.’”


ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.


ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮಗೆ ವಿರೋಧವಾಗಿದ್ದೇನೆ. ಬೇರೆ ಜನರ ಕಣ್ಣೆದುರಿನಲ್ಲಿಯೇ ನಿಮ್ಮನ್ನು ದಂಡಿಸುವೆನು.


ಆದರೆ ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲಿಗೆ ಹೊಡೆಯುವೆನು, ಆಗ ನಿನ್ನ ಬಲಗೈಯಲ್ಲಿರುವ ಬಾಣವು ಬಿದ್ದುಹೋಗುವುದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು