ಯೆರೆಮೀಯ 21:6 - ಪರಿಶುದ್ದ ಬೈಬಲ್6 ಜೆರುಸಲೇಮಿನಲ್ಲಿ ವಾಸಮಾಡುತ್ತಿರುವ ಜನರನ್ನು ನಾನು ಕೊಂದುಬಿಡುತ್ತೇನೆ. ನಾನು ಜನರನ್ನು ಮತ್ತು ಪ್ರಾಣಿಗಳನ್ನು ಕೊಲ್ಲುತ್ತೇನೆ. ಅವರುಗಳು ನಗರದಲ್ಲೆಲ್ಲಾ ಹರಡಿದ ಭಯಂಕರವಾದ ರೋಗದಿಂದ ಮಡಿಯುವರು.’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಮತ್ತು ಪಶುಗಳನ್ನೂ ಬಾಧಿಸುವೆನು, ಘೋರವ್ಯಾಧಿಯು ಅವರನ್ನು ಸಾಯಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ನಗರದಲ್ಲಿ ವಾಸಮಾಡುವ ಜನರನ್ನೂ ಜಾನುವಾರುಗಳನ್ನೂ ಹಿಂಸೆಗೆ ಗುರಿಪಡಿಸುವೆನು; ಘೋರ ಜಾಡ್ಯಕ್ಕೆ ತುತ್ತಾಗಿಸಿ ಸಾಯುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಪಶುಗಳನ್ನೂ ಬಾಧಿಸುವೆನು; ಘೋರವ್ಯಾಧಿಯು ಸಾಯಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.