ಯೆರೆಮೀಯ 21:7 - ಪರಿಶುದ್ದ ಬೈಬಲ್7 “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’ ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
ಯೆರೆಮೀಯನೇ, ಯೆಹೂದದ ರಾಜನಾದ ಯೆಹೋಯಾಕೀಮನಿಗೆ ಹೀಗೆ ಹೇಳು, ‘ಯೆಹೋವನು ಹೀಗೆನ್ನುತ್ತಾನೆ: ಯೆಹೋಯಾಕೀಮನೇ, ನೀನು ಆ ಸುರುಳಿಯನ್ನು ಸುಟ್ಟುಬಿಟ್ಟೆ. ನೀನು, “ಬಾಬಿಲೋನ್ ರಾಜನು ಖಂಡಿತವಾಗಿ ಬಂದು ಈ ದೇಶವನ್ನು ನಾಶಮಾಡುವನು ಎಂದು ಯೆರೆಮೀಯನು ಏಕೆ ಬರೆದನು? ಬಾಬಿಲೋನ್ ರಾಜನು ಈ ದೇಶದ ಮನುಷ್ಯರನ್ನು ಮತ್ತು ಪ್ರಾಣಿಗಳನ್ನು ನಾಶಮಾಡುವನು ಎಂದು ಏಕೆ ಹೇಳಿದನು?” ಎಂದು ಕೇಳಿದೆ.