Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:9 - ಪರಿಶುದ್ದ ಬೈಬಲ್‌

9 ಜೆರುಸಲೇಮಿನಲ್ಲಿ ಉಳಿಯುವವನು ಮರಣಹೊಂದುವನು. ಆತನು ಖಡ್ಗದಿಂದಾಗಲಿ ಹಸಿವಿನಿಂದಾಗಲಿ ಭಯಂಕರವಾದ ರೋಗದಿಂದಾಗಲಿ ಮಡಿಯುವನು. ಆದರೆ ಜೆರುಸಲೇಮಿನಿಂದ ಹೊರಗೆ ಬಾಬಿಲೋನಿನ ಸೈನಿಕರಿಗೆ ಶರಣಾಗತನಾದವನು ಬದುಕುವನು. ಆ ಸೈನಿಕರು ನಗರವನ್ನು ಮುತ್ತಿದ್ದಾರೆ. ಯಾರೂ ನಗರದಲ್ಲಿ ಆಹಾರವನ್ನು ತರುವಂತಿಲ್ಲ. ಆದರೆ ನಗರವನ್ನು ಬಿಟ್ಟು ಹೊರಗೆ ಹೋದವರು ಬದುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪಟ್ಟಣದಲ್ಲಿ ನಿಲ್ಲುವವನು ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವನು; ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮರೆಹೊಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:9
12 ತಿಳಿವುಗಳ ಹೋಲಿಕೆ  

“ಯೆಹೋವನು ಹೀಗೆನ್ನುತ್ತಾನೆ: ‘ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರು ಖಡ್ಗದಿಂದಾಗಲಿ ಕ್ಷಾಮದಿಂದಾಗಲಿ ಭಯಂಕರವಾದ ವ್ಯಾಧಿಯಿಂದಾಗಲಿ ಸತ್ತುಹೋಗುವರು. ಆದರೆ ಬಾಬಿಲೋನಿನ ಸೈನಿಕರಿಗೆ ಶರಣಾಗುವ ಪ್ರತಿಯೊಬ್ಬರು ಬದುಕುವರು. ಅವರು ಜೀವಂತ ಉಳಿಯುವರು.’


ಬಾರೂಕನೇ, ನೀನು ದೊಡ್ಡ ಪದವಿಯನ್ನು ನಿರೀಕ್ಷಿಸುತ್ತಿರುವೆ. ಆದರೆ ನೀನು ಅದನ್ನು ನಿರೀಕ್ಷಿಸಬೇಡ. ಏಕೆಂದರೆ ನಾನು ಎಲ್ಲರಿಗೆ ಭಯಂಕರವಾದ ಸಂಗತಿಗಳನ್ನು ಬರಮಾಡುವೆನು.”’ ಯೆಹೋವನು ಹೀಗೆ ಹೇಳಿದನು, ‘ನೀನು ಅನೇಕ ಸ್ಥಳಗಳಿಗೆ ಹೋಗಬೇಕಾಗಬಹುದು. ಅದರೆ ನೀನು ಎಲ್ಲಿ ಹೋದರೂ ಪ್ರಾಣ ಉಳಿಸಿಕೊಂಡು ಪಾರಾಗುವಂತೆ ನಾನು ಮಾಡುತ್ತೇನೆ.’”


ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುವೆನು. ನೀನು ಖಡ್ಗಕ್ಕೆ ಆಹುತಿಯಾಗುವದಿಲ್ಲ. ನೀನು ತಪ್ಪಿಸಿಕೊಂಡು ಬದುಕುವೆ. ನೀನು ನನ್ನಲ್ಲಿ ನಂಬಿಕೆ ಇಟ್ಟುಕೊಂಡಿದ್ದೇ ಇದಕ್ಕೆ ಕಾರಣ’” ಇದು ಯೆಹೋವನ ನುಡಿ.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ಬಾಬಿಲೋನಿನ ರಾಜನ ಸೇವೆಮಾಡಲು ಒಪ್ಪದಿದ್ದರೆ ನೀನು ಮತ್ತು ನಿನ್ನ ಜನರು ವೈರಿಗಳ ಖಡ್ಗದಿಂದಲೂ ಹಸಿವೆಯಿಂದಲೂ ಭಯಂಕರವಾದ ವ್ಯಾಧಿಗಳಿಂದಲೂ ಸಾಯುವಿರಿ. ಇದು ನೆರವೇರುತ್ತದೆಯೆಂದು ಯೆಹೋವನು ಹೇಳಿದ್ದಾನೆ.


“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’


ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”


“‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’” ಇದು ಯೆಹೋವನ ನುಡಿ.


ನಿನ್ನ ಜನರಲ್ಲಿ ಮೂರನೆ ಒಂದು ಭಾಗ ಪಟ್ಟಣದೊಳಗೆ ರೋಗದಿಂದಲೂ ಹಸಿವಿನಿಂದಲೂ ಸಾಯುವರು. ಮೂರರಲ್ಲಿ ಇನ್ನೊಂದು ಭಾಗ ಪಟ್ಟಣದ ಹೊರಗೆ ರಣರಂಗದಲ್ಲಿ ಸಾಯುವರು. ಅನಂತರ ನಾನು ನನ್ನ ಖಡ್ಗವನ್ನು ಇರಿದು ಉಳಿದವರನ್ನು ಬಹುದೂರದ ದೇಶಕ್ಕೆ ಅಟ್ಟಿಬಿಡುವೆನು.


ನಾನು ಯೆಹೂದದ ರಾಜನಾದ ಚಿದ್ಕೀಯನಿಗೂ ಇದೇ ಸಂದೇಶವನ್ನು ಕೊಟ್ಟಿದ್ದೇನೆ. “ಚಿದ್ಕೀಯನೇ, ನೀನು ನಿನ್ನ ಹೆಗಲನ್ನು ಬಾಬಿಲೋನಿನ ರಾಜನ ನೊಗಕ್ಕೆ ಕೊಡಬೇಕು; ಅವನ ಆಜ್ಞಾಪಾಲನೆ ಮಾಡಬೇಕು. ಬಾಬಿಲೋನಿನ ರಾಜನ ಮತ್ತು ಅಲ್ಲಿಯ ಜನರ ಸೇವೆಮಾಡಿಕೊಂಡಿದ್ದರೆ ನೀನು ಬದುಕುವೆ.


ಯೆಹೋವನು ಹೀಗೆನ್ನುತ್ತಾನೆ: ‘ಈ ಜೆರುಸಲೇಮ್ ನಗರವನ್ನು ಖಂಡಿತವಾಗಿಯೂ ಬಾಬಿಲೋನ್ ರಾಜನ ಸೈನಿಕರ ಕೈಗೆ ಒಪ್ಪಿಸಲಾಗುವುದು. ಅವನು ಈ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು