ಯೆರೆಮೀಯ 22:12 - ಪರಿಶುದ್ದ ಬೈಬಲ್12 ಈಜಿಪ್ಟಿನವರು ಅವನನ್ನು ತೆಗೆದುಕೊಂಡು ಹೋದ ಸ್ಥಳದಲ್ಲಿಯೇ ಸತ್ತುಹೋಗುವನು. ಅವನು ಮತ್ತೊಮ್ಮೆ ಈ ಪ್ರದೇಶವನ್ನು ನೋಡಲಾರನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದಿಲ್ಲ. ಅವನನ್ನು ಎಲ್ಲಿಗೆ ಸೆರೆ ಒಯ್ದರೋ ಅಲ್ಲೇ ಅವನು ಸಾಯುವನು. ಈ ನಾಡನ್ನು ಇನ್ನು ಅವನು ನೋಡುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು ಎಂಬದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.” ಅಧ್ಯಾಯವನ್ನು ನೋಡಿ |
ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.
“ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನ್ನ ಕೋಪವನ್ನು ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನ್ನು ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನ್ನ ಕೋಪವನ್ನು ತೋರಿಸುವೆನು. ಬೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಬೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನ್ನು ಕೊಡುವರು. ನೀವು ಒಂದು ಶಾಪದ ಶಬ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನ್ನು ಅಪಮಾನ ಮಾಡುವರು. ಯೆಹೂದವನ್ನು ಪುನಃ ನೀವು ಎಂದೂ ನೋಡುವದಿಲ್ಲ.’