Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:13 - ಪರಿಶುದ್ದ ಬೈಬಲ್‌

13 “ರಾಜನಾದ ಯೆಹೋಯಾಕೀಮನಿಗೆ ದುರ್ಗತಿ ಉಂಟಾಗುವುದು. ಅವನು ತನ್ನ ಅರಮನೆಯನ್ನು ಕಟ್ಟಿಸುವದಕ್ಕೋಸ್ಕರ ದುರ್ನೀತಿಯನ್ನು ಅವಲಂಭಿಸಿದ್ದಾನೆ. ಮಹಡಿಯ ಮೇಲೆ ಕೋಣೆಗಳನ್ನು ಕಟ್ಟಿಸುವದಕ್ಕಾಗಿ ಅವನು ತನ್ನ ಜನರನ್ನು ವಂಚಿಸುತ್ತಿದ್ದಾನೆ. ಅವನು ತನ್ನ ಜನರಿಂದ ಬಿಟ್ಟಿಕೆಲಸವನ್ನು ಮಾಡಿಸುತ್ತಿದ್ದಾನೆ. ಅವರಿಂದ ಕೆಲಸ ಮಾಡಿಸಿಕೊಂಡು ಅವರಿಗೆ ಕೂಲಿಯನ್ನೇ ಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತನ್ನ ಅರಮನೆಯನ್ನು ದುರ್ನೀತಿಯಿಂದಲೂ ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:13
16 ತಿಳಿವುಗಳ ಹೋಲಿಕೆ  

ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಜನರನ್ನು ಕೊಲೆ ಮಾಡಿ ಚೀಯೋನನ್ನು ಕಟ್ಟುತ್ತೀರಿ. ಜನರನ್ನು ಮೋಸಮಾಡಿ ಜೆರುಸಲೇಮನ್ನು ಕಟ್ಟುತ್ತೀರಿ.


“ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.


ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಯೋಷೀಯನ ಮಗನಾದ ಯೆಹೋಯಾಕೀಮನಿಗೆ ಯೆಹೋವನು ಹೀಗೆ ಹೇಳುವನು, “ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಗೋಳಾಡುವದಿಲ್ಲ. ಅವರು ಒಬ್ಬರಿಗೊಬ್ಬರು, ‘ನನ್ನ ಸೋದರನೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ, ನನ್ನ ಸೋದರಿಯೇ, ಯೆಹೋಯಾಕೀಮನಿಗೋಸ್ಕರ ನನಗೆ ತುಂಬ ದುಃಖವಾಗಿದೆ’ ಎಂದು ಹೇಳುವದಿಲ್ಲ. ಯೆಹೂದದ ಜನರು ಯೆಹೋಯಾಕೀಮನಿಗೋಸ್ಕರ ಅಳುವದಿಲ್ಲ. ಅವರು ಅವನ ಬಗ್ಗೆ ‘ಒಡೆಯನೇ, ನನ್ನ ರಾಜನೇ, ನನಗೆ ತುಂಬಾ ದುಃಖವಾಗಿದೆ’ ಎಂದು ಹೇಳುವದಿಲ್ಲ.


ನೆಕೋ ಯೆಹೋವಾಹಾಜನ ತಮ್ಮನಾದ ಎಲ್ಯಾಕೀಮನನ್ನು ಯೆಹೋವಾಹಾಜನ ಬದಲಿಗೆ ಯೆಹೂದದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು. ಅವನಿಗೆ ಎಲ್ಯಾಕೀಮನ ಬದಲು ಯೆಹೋಯಾಕೀಮ ಎಂಬ ಹೆಸರಿಟ್ಟನು. ನೆಕೋ ಯೆಹೋವಾಹಾಜನನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದನು.


ಯೆಹೋಯಾಕೀಮನು ಯೆಹೂದ ದೇಶದ ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಯೆಹೋಯಾಕೀಮನು ಯೆಹೋವನ ಚಿತ್ತಕ್ಕೆ ಒಳಗಾಗಲಿಲ್ಲ. ಅವನು ತನ್ನ ದೇವರಾದ ಯೆಹೋವನ ವಿರುದ್ಧವಾಗಿ ಪಾಪಮಾಡಿದನು.


ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.


ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”


ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರೀಗೈಯಲ್ಲಿ ಕಳುಹಿಸಬಾರದು.


ನಾನು ರೈತರಿಗೆ ಬೆಳೆಯಲ್ಲಿ ಪಾಲು ಕೊಟ್ಟೆನು; ಯಾರೂ ಹಸಿವೆಯಿಂದ ಇರಲು ಬಿಡಲಿಲ್ಲ.


“ಪಟ್ಟಣ ಕಟ್ಟುವುದಕ್ಕಾಗಿ ಜನರನ್ನು ಕೊಲ್ಲುವವನಿಗೂ ಪಟ್ಟಣದ ಕೋಟೆಗಳನ್ನು ಭದ್ರಪಡಿಸಲು ದುಷ್ಕೃತ್ಯಗಳನ್ನು ಮಾಡುವವನಿಗೂ ಕೇಡಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು